ಕಮಲ್ ಹಾಸನ್ ಪುತ್ರಿ, ನಟಿ ಶ್ರುತಿ ಹಾಸನ್ ವಿಚಿತ್ರ ಸಮಸ್ಯೆಯೊಂದರಿಂದ ಹೈರಾಣಾಗಿದ್ದಾರಂತೆ. ಕೋವಿಡ್ ಗಿಂತಲೂ ಈ ಸಮಸ್ಯೆ ತುಂಬಾ ಬಾಧಿಸುತ್ತಿದೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.ಕಳೆದ ಒಂದು ತಿಂಗಳ ಹಿಂದೆ ಶ್ರುತಿ ಹಾಸನ್ ಅವರಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರು ಕೊರೋನಾಗೆ ಬೇಕಾದ ಅಗತ್ಯ ಚಿಕಿತ್ಸೆಯನ್ನು ಪಡೆದುಕೊಂಡರು. ಬರೋಬ್ಬರಿ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆದರು. ಆದರೂ, ಕೋವಿಡ್ ನಂತರ ಅವರಿಗೆ ಬೇರೆ ಬೇರೆ ಸಮಸ್ಯೆಗಳು ಕಾಣಿಸಿಕೊಂಡಿವೆಯಂತೆ. ಇದನ್ನೂ ಓದಿ : ಪುನೀತ್ ಅಭಿಮಾನಿಗಳಿಗೆ ಭಾರೀ ನಿರಾಸೆ : ಮೆರವಣಿಗೆ ಇಲ್ಲ, ಹೆಲಿಕಾಪ್ಟರ್ ಗೆ ಅನುಮತಿ ಕೊಟ್ಟಿಲ್ಲಕೋವಿಡ್ ಗೆ ಚಿಕಿತ್ಸೆ ಪಡೆದುಕೊಂಡ ನಂತರ ವಿಪರೀತ ತಲೆನೋವು ಶುರುವಾಗಿದೆ. ದೇಹ ಆಯಾಸಗೊಳ್ಳುತ್ತದೆ. ನಿದ್ರಾಹೀನತೆಯಿಂದ ಬಳಲುತ್ತಿದ್ದೇವೆ. ಇದರಿಂದಾಗಿ ಬೇರೆ ಬೇರೆ ಸಮಸ್ಯೆಗಳು ನನ್ನಲ್ಲಿ ಶುರುವಾಗಿವೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಕೋವಿಡ್ ನಿಂದಾದ ಪರಿಣಾಮನಾ ಇದು ಎಂದು ಕೇಳಿದ್ದಾರೆ. ಇದನ್ನೂ ಓದಿ : ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಯಾರದು ಪ್ರತಾಪ್ ರೆಡ್ಡಿ?ತೆಲುಗು ಮತ್ತು ತಮಿಳು ಸಿನಿಮಾಗಳನ್ನು ಒಪ್ಪಿಕೊಂಡಿರುವ ಶ್ರುತಿ, ಈಗ ಅವುಗಳ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕಿದೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯ. ಈ ಸಮಸ್ಯೆಗಳ ನಡುವೆಯೂ ಅವು ನಿರಂತರವಾಗಿ ವ್ಯಾಯಾಮ ಮಾಡುತ್ತಿದ್ದಾರಂತೆ. ಆದರೆ, ನಿದ್ರೆ ಸಮಸ್ಯೆಯೇ ಅವರನ್ನು ಗಂಭೀರವಾಗಿ ಕಾಡುತ್ತಿದೆ ಎಂದು ಬರೆದುಕೊಂಡಿದ್ದಾರೆ.Sign in to your account
Username or Email Address


Password

 Remember Me


