ಧಾರವಾಡ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಗ್ರಾಮ ಪಂಚಾಯತಿ ಸದಸ್ಯನೋರ್ವ ಕಿರುಕುಳ ನೀಡಿದ್ದನು. ಈ ಹಿನ್ನೆಲೆ ಯುವತಿ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಬೊಗೂರ ಗ್ರಾಮದಲ್ಲಿ ನಡೆದಿದೆ.ಸರಸ್ವತಿ ಅಜ್ಜನರ(20) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಮಲ್ಲಪ್ಪ ಮಾಳವಾಡ ಕಿರುಕುಳ ಕೊಟ್ಟ ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದು, ಮುಂದಿನ ಒಂದು ತಿಂಗಳಲ್ಲಿ ಸರಸ್ವತಿ ಮದುವೆ ನಡೆಯಬೇಕಿತ್ತು. ಆದರೆ ತನ್ನನ್ನು ಮದುವೆಯಾಗುವಂತೆ ಗ್ರಾಪಂ ಮಲ್ಲಪ್ಪ, ಸರಸ್ವತಿಗೆ ಕಿರುಕುಳ ನೀಡುತ್ತಿದ್ದ. ಇದನ್ನೂ ಓದಿ: ನರಬಲಿಗಾಗಿ 7 ವರ್ಷದ ಕಂದಮ್ಮ ಅಪಹರಣ – ಇಬ್ಬರು ಅರೆಸ್ಟ್ಕಿರುಕುಳದಿಂದ ಬೇಸತ್ತ ಸರಸ್ವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರಸ್ತುತ ಯುವತಿಯನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬದವರು ನಿರ್ಧಾರ ಮಾಡಿದ್ದಾರೆ.ಯುವತಿ ಆತ್ಮಹತ್ಯೆಗೆ ಯತ್ನಿಸಿದ ನಂತರ ಪೊಲೀಸರು ದೂರು ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ಪೆÇೀಷಕರು ಆರೋಪ ಮಾಡಿದ್ದಾರೆ. ಇದನ್ನೂ ಓದಿ: CFI ಅಧ್ಯಕ್ಷ ಅತಾವುಲ್ಲಾ ಮೇಲೆ ಕೇಸ್ ದಾಖಲಿಸಲು AG ಅನುಮತಿ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್Sign in to your account
Username or Email Address


Password

 Remember Me


