ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಎಸಿಬಿ ದಾಳಿ ಮಾಡಿದ್ದು, ಪ್ರಾದೇಶಿಕ ಅರಣ್ಯಾಧಿಕಾರಿಯೊಬ್ಬರ ಎರಡು ನಿವಾಸಗಳ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.ಸದ್ಯ ಯಾದಗಿರಿಯಲ್ಲಿ ಅರಣ್ಯ ಇಲಾಖೆಯ ಪ್ರಾದೇಶಿಕ ಅರಣ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ರಮೇಶ್ ಕನಕಟ್ಟಿ ನಿವಾಸಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಓಲ್ಡ್ ಆದರ್ಶ ಕಾಲೋನಿ ಹಾಗೂ ಚಿಟಗುಪ್ಪಾ ತಾಲೂಕಿನಲ್ಲಿರುವ ಉಡಬಾಳ ಗ್ರಾಮದಲ್ಲಿರುವ ನಿವಾಸದ ಮೇಲೆಯೂ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಹಿರಿಯ ವಕೀಲರು ಕಾಂಗ್ರೆಸ್ ಸಂಸ್ಕೃತಿಯ ವ್ಯಕ್ತಿಯಲ್ಲ: ಕಪಿಲ್ ಸಿಬಲ್ ವಿರುದ್ಧ ಗೆಹ್ಲೋಟ್ ಕಿಡಿಅಕ್ರಮ ಆಸ್ತಿಯನ್ನು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿಯ ಕಚೇರಿ ಸೇರಿದಂತೆ ಏಕಕಾಲಕ್ಕೆ ಮೂರು ಕಡೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಎಸ್‍ಪಿ ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದು, ಅಕ್ರಮ ಆಸ್ತಿಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.  ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಏಕಕಾಲದಲ್ಲಿ ಎಸಿಬಿ ದಾಳಿSign in to your account
Username or Email Address


Password

 Remember Me


