ಮಡಿಕೇರಿ: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಬೇಕು, ಇಲ್ಲದಿದ್ದರೆ ಮುಂದೆ ಎಲ್ಲಾ ಧರ್ಮಗಳ ಆಚರಣೆಗಳಿಗೆ ಕುತ್ತು ಬರಲಿದೆ ಎಂದು ಬದ್ರಿಯಾ ಜಮಾಅತ್‍ನ ಅಧ್ಯಕ್ಷರಾದ ಮಡಿಕೇರಿ ನಗರಸಭೆಯ ಎಸ್‍ಡಿಪಿಐ ಸದಸ್ಯರು ಅಮಿನ್ ಮೊಹಿನ್ಸಿನ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಇದರಿಂದಾಗಿ ಜನರ ಜನರ ನಂಬಿಕೆಯನ್ನು ಹುಸಿಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.ಇದು ಮುಸ್ಲಿಂ ಧರ್ಮದ ಆಚರಣೆಯ ವಿರುದ್ಧದ ತೀಪೆರ್ಂದು ಜನರು ಭಾವಿಸಬಾರದು ಬದಲಾಗಿ ಇದು ಎಲ್ಲಾ ಧರ್ಮಗಳ ಆಚರಣೆ ವಿರುದ್ಧ ತೀಪೆರ್ಂದು ಭಾವಿಸಬೇಕು. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಬೇಕು ಇಲ್ಲದಿದ್ದರೆ ಮುಂದೆ ಎಲ್ಲಾ ಧರ್ಮಗಳ ಆಚರಣೆಗಳಿಗೆ ಕುತ್ತು ಬರಲಿದೆ. ಹೀಗಾಗಿ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಿ ನ್ಯಾಯ ಪಡಿಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಹೈಕೋರ್ಟ್ ತೀರ್ಪಿನಿಂದ ನಿರಾಸೆ: ಒಮರ್ ಅಬ್ದುಲ್ಲಾಕೋರ್ಟಿನಲ್ಲಿ ವಿಚಾರಣೆ ವೇಳೆ ಹಿಜಬ್ ಮುಖ್ಯವಾ ಅಥವಾ ಶಿಕ್ಷಣ ಮುಖ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ. ಈ ರೀತಿ ಪ್ರಶ್ನೆ ಮಾಡುವುದು ಸರಿಯಲ್ಲ. ಇದು ತಂದೆ, ತಾಯಿಯರನ್ನು ಮುಂದೆ ಇಟ್ಟು ಯಾರು ಬೇಕು, ಎರಡು ಕಣ್ಣುಗಳಲ್ಲಿ ಯಾವುದು ಮುಖ್ಯ ಎಂದು ಪ್ರಶ್ನಿಸಿದರೇ ಆಯ್ಕೆ ಮಾಡಲು ಹೇಗೆ ಅಸಾಧ್ಯವಾಗುತ್ತದೆಯೋ ಅದೇ ರೀತಿಯಾಗಿದೆ. ಆದರೆ ಮಕ್ಕಳಿಗೆ ಶಿಕ್ಷಣ ಮತ್ತು ಧರ್ಮ ಎರಡು ಮುಖ್ಯವಾಗಿರುತ್ತದೆ. ಹೀಗಾಗಿ ಮತ್ತೆ ಈ ಪ್ರಕರಣ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸುವ ಚಿಂತನೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಉರ್ದು ಶಾಲೆಗಳು ಕಾನೂನು ಪಾಲನೆ ಮಾಡಬೇಕು: ಬಿ.ಸಿ. ನಾಗೇಶ್Sign in to your account
Username or Email Address


Password

 Remember Me


