ಮೊದಲಿನಿಂದಲೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡುತ್ತಾ ಬಂದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್, ಮೊನ್ನೆಯಷ್ಟೇ ಬಾಲಿವುಡ್ ನಟ ನಟಿಯರ ಮೇಲೆ ವಾಗ್ದಾಳಿ ನಡೆಸಿದ್ದರು. ಈ ಸಿನಿಮಾದ ಬಗ್ಗೆ ಬಾಲಿವುಡ್ ಏಕೆ ಮೌನ ತಾಳಿದೆ ಎಂದು ಪ್ರಶ್ನಿಸಿದರು. ಈಗ ಈ ಸಿನಿಮಾದ ಕುರಿತು ಮತ್ತೊಂದು ವಿಡಿಯೋ ಸಂದೇಶ ರವಾನಿಸಿದ್ದಾರೆ. ಇಲ್ಲಿಯೂ ಬಾಲಿವುಡ್ ಬಗ್ಗೆಯೇ ಅವರು ಮಾತನಾಡಿದ್ದಾರೆ.ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಮತ್ತೆ ಮೆಚ್ಚುಗೆಯ ಮಾತುಗಳನ್ನು ಆಡಿದ ಕಂಗನಾ, ಈ ಸಿನಿಮಾದ ಮೂಲಕ ಬಾಲಿವುಡ್ ಮಾಡಿದ ಪಾಪ ಕಳೆದಂತಾಗಿದೆ. ಇಂತಹ ಸಿನಿಮಾ ಮಾಡಿ ವಿವೇಕ್ ಅಗ್ನಿಹೋತ್ರಿ ಅವರು ಬಾಲಿವುಡ್ ಮಾಡಿದ್ದ ಪಾಪವನ್ನು ತೊಳೆದಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ ಕಂಗನಾ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್ಈ ಸಿನಿಮಾವನ್ನು ಪ್ರತಿಯೊಬ್ಬರು ಬೆಂಬಲಿಸಬೇಕು. ಇಂತಹ ಚಿತ್ರಗಳು ಹೆಚ್ಚೆಚ್ಚು ಬರಬೇಕು. ಹಾಗಾಗಿ ಈ ಸಿನಿಮಾವನ್ನು ನಾನು ನಿರಂತರವಾಗಿ ಬೆಂಬಲಿಸುತ್ತಿದ್ದೇನೆ ಎಂದು ಕಂಗನಾ ಹೇಳಿದ್ದಾರೆ. ಅಲ್ಲದೇ, ಬಾಲಿವುಡ್ ನ ಎಲ್ಲರೂ ಈ ಸಿನಿಮಾವನ್ನು ಬೆಂಬಲಿಸಬೇಕೆಂದು ಅವರು ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ನಾನಾ ರಾಜ್ಯದ ಮುಖ್ಯಮಂತ್ರಿಗಳು ಈ ಸಿನಿಮಾ ಬೆನ್ನಿಗೆ ನಿಂತಿದ್ದಾರೆ. ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದ್ದಾರೆ. ವಿಶೇಷ ಪ್ರದರ್ಶನಗಳನ್ನೂ ಏರ್ಪಡಿಸುತ್ತಿದ್ದಾರೆ. ಅಲ್ಲದೇ, ಅನೇಕ ನಟ ನಟಿಯರು ಕೂಡ ಸ್ವಯಂ ಪ್ರೇರಿತರಾಗಿ ಸಿನಿಮಾ ಬಗ್ಗೆ ಪ್ರಚಾರವನ್ನೂ ಮಾಡುತ್ತಿದ್ದಾರೆ.Sign in to your account
Username or Email Address


Password

 Remember Me


