ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ವಿಚಾರವಾಗಿ  ವಿರೋಧ ಪಕ್ಷವಾದ ಕಾಂಗ್ರೆಸ್ ವಿರುದ್ಧವಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ಮಾಡಿದ್ದಾರೆ.ಟ್ವೀಟ್‍ನಲ್ಲಿ ಏನಿದೆ?: ಶಾಲಾ ಹಂತದಲ್ಲೇ ಬಗೆಹರಿಯಬಹುದಾದ ಹಿಜಬ್ ವಿಚಾರವನ್ನು ನ್ಯಾಯಾಲಯದವರೆಗೆ ಎಳೆದು ತರುವ ಅಗತ್ಯವಿರಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಜಾರಿಗೊಳಿಸಿದ ಸಮವಸ್ತ್ರ ನೀತಿಯಲ್ಲಿ ತಪ್ಪಿಲ್ಲ. ಸಮವಸ್ತ್ರ ಮೂಲಭೂತ ಹಕ್ಕುಗಳ ಮೇಲಿನ ಸಮಂಜಸ ನಿರ್ಬಂಧ ಎಂದು ಕೋರ್ಟ್ ಅಭಿಪ್ರಾಯಪಟ್ಟಿರುವುದು ಸ್ವಾಗತಾರ್ಹವಾಗಿದೆ.ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ @INCKarnataka ತನ್ನದೇ‌ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು.ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು.ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ?#YesToUniform_NoToHijab— BJP Karnataka (@BJP4Karnataka) March 15, 2022ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ. ಹಿಜಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‍ಡಿಪಿಐ, ಸಿಎಫ್‍ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು ಎಂದು ವಿರೋಧ ಪಕ್ಷದ ವಿರುದ್ಧವಾಗಿ ವಾಗ್ಧಾಳಿ ಮಾಡಿ ಟ್ವೀಟ್ ಮಾಡಲಾಗಿದೆ.  ಇದನ್ನೂ ಓದಿ: ಹಿಜಬ್ ಇಸ್ಲಾಂ ಆಚರಣೆಯಲ್ಲ ಅನ್ನೋ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಲ್ಲ: ಯು.ಟಿ.ಖಾದರ್ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಾಬ್ ವಿವಾದಕ್ಕೆ ಪುಷ್ಟಿ ನೀಡಿತು.ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು.ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ @INCKarnataka ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ.#YesToUniform_NoToHijab— BJP Karnataka (@BJP4Karnataka) March 15, 2022ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ. ಈ ಪ್ರಕರಣದಲ್ಲಿ ಹಿಜಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಅವರು ಹಿಜಬ್ ಧರಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.ಈ ಪ್ರಕರಣದಲ್ಲಿ ಹಿಜಾಬ್‌ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ @siddaramaiah ಅವರಿಗೆ ತೀವ್ರ ಹಿನ್ನಡೆಯಾಗಿದೆ.ಸಿದ್ದರಾಮಯ್ಯ ಅವರು “ಹಿಜಾಬ್‌ ಧರಿಸುವುದು ಮೂಲಭೂತ ಹಕ್ಕು” ಎಂದು ಪ್ರತಿಪಾದಿಸಿದ್ದರು.ಈಗ ನ್ಯಾಯಾಲಯವೇ, ಹಿಜಾಬ್‌ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. #YesToUniform_NoToHijab— BJP Karnataka (@BJP4Karnataka) March 15, 2022ಈಗ ನ್ಯಾಯಾಲಯವೇ, ಹಿಜಬ್ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಬ್ ವಿವಾದಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂತಿರುಗಿ: ಮಾಳವಿಕಾ ಅವಿನಾಶ್ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‌ಡಿಪಿಐ, ಸಿಎಫ್‌ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು.ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು.ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ.#YesToUniform_NoToHijab— BJP Karnataka (@BJP4Karnataka) March 15, 2022ಹಿಜಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ ಕಾಂಗ್ರೆಸ್ ತನ್ನದೇ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು. ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಪ್ರಶ್ನಿಸಿ ಟ್ವೀಟ್ ಮಾಡಲಾಗಿದೆ.ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು.ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು.ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ.#YesToUniform_NoToHijab— BJP Karnataka (@BJP4Karnataka) March 15, 2022ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.Sign in to your account
Username or Email Address


Password

 Remember Me


