ಮಂಗಳೂರು: ಕರ್ನಾಟಕದಲ್ಲಿ ಉದ್ಭವವಾಗಿ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವಾದ ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್‌ ತೀರ್ಪು ನೀಡಲಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾಳೆ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪುಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ‌ಮುಂದುವರಿಯಲಿವೆ. ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ಆದೇಶಿಸಲಾಗಿದೆ.ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ನಾಳೆ ತೀರ್ಪು ಪ್ರಕಟಿಸಲಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿದ್ದ ನನ್ನ ಪೂರ್ವಜರು ನೋವು ತಿಂದೆ ಕಾಶ್ಮೀರ ಬಿಟ್ಟರು : ಅನಂತ್ ನಾಗ್ ಬಿಚ್ಚಿಟ್ಟ ಕಾಶ್ಮೀರಿ ಕ್ರೌರ್ಯSign in to your account
Username or Email Address


Password

 Remember Me


