ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಕನ್ನಡ ಇವೆಂಟ್ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ. ಮಾರ್ಚ್ 19ರಂದು ನಡೆಯಲಿರುವ ಈ ಇವೆಂಟ್ ಗಾಗಿ 100 ಎಕರೆ ಪ್ರದೇಶ ಸಿದ್ಧಗೊಳ್ಳುತ್ತಿದೆ. 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಲಿರುವ ಈ ಕಾರ್ಯಕ್ರಮದಲ್ಲಿ ತೆಲುಗು, ತಮಿಳು ಮತ್ತು ಕನ್ನಡದ ಸ್ಟಾರ್ ನಟರು ಭಾಗಿಯಾಗುತ್ತಿರುವುದು ವಿಶೇಷ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!ಈ ಇವೆಂಟ್ ಅನ್ನು ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸಲು ಚಿತ್ರತಂಡ ನಿರ್ಧರಿಸಿದ್ದು, ಪುನೀತ್ ನೆನಪಿನಲ್ಲಿ ಹಲವು ಕಾರ್ಯಕ್ರಮಗಳು ಕೂಡ ನಡೆಯುತ್ತವೆ. ಇದರ ನೇತೃತ್ವವನ್ನು ಶಿವರಾಜ್ ಕುಮಾರ್ ಅವರಿಗೆ ವಹಿಸಲಾಗಿದೆಯಂತೆ.  ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಮಾತ್ರವಲ್ಲ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಾಗಿ ಎಲ್ಲ ರೀತಿಯ ಭದ್ರತೆಯನ್ನೂ ಮಾಡಿಕೊಳ್ಳಲಾಗುತ್ತಿದೆಯಂತೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್, ಜ್ಯೂನಿಯರ್ ಎನ್.ಟಿ.ಆರ್, ಆಲಿಯಾ ಭಟ್, ಅಜಯ್ ದೇವಗನ್,  ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಸೇರಿದಂತೆ ಚಿತ್ರತಂಡದ ಬಹುತೇಕ ಸದಸ್ಯರು ಕೂಡ ಅಂದು ಭಾಗಿಯಾಗಲಿದ್ದಾರೆ. ಮನರಂಜನೆ ಕಾರ್ಯಕ್ರಮ ಮತ್ತು ಚಿತ್ರತಂಡದೊಂದಿಗೆ ಸಂವಾದ ಕೂಡ ಈ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.Sign in to your account
Username or Email Address


Password

 Remember Me


