ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಇಳಿಕೆಯಾಗಿದ್ದು, 164 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,43,806ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 112 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,80,336ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಸಾವು ವರದಿಯಾಗಿಲ್ಲ. ಒಟ್ಟು ಸಾವಿನ ಸಂಖ್ಯೆ 40,018 ಏರಿಕೆಯಾಗಿದೆ.ಇಂದು 130 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,01,093ಕ್ಕೆ ಏರಿಕೆಯಾಗಿದೆ. ಇನ್ನು 2656 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 112, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 21, ದಕ್ಷಿಣ ಕನ್ನಡ 3, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ3, ಕೊಡಗು 0, ಕೋಲಾರ 1, ಕೊಪ್ಪಳ 1, ಮಂಡ್ಯ 1, ಮೈಸೂರು 7, ರಾಯಚೂರು 0, ರಾಮನಗರ 0, ಶಿವಮೊಗ್ಗ 0, ತುಮಕೂರು 4, ಉಡುಪಿ 0, ಉತ್ತರ ಕನ್ನಡ 1, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


