ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನ್ನೊವಾ ಕಾರು ಡಿಕ್ಕಿಯಾದ ಪರಿಣಾಮ ತಾಯಿ ಹಾಗೂ ಮಗಳು ಸ್ಥಳದಲ್ಲಿಯೇ ಮೃತ ಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಹುಕ್ಕೇರಿ ತಾಲೂಕಿನ ನರಸಿಂಗಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೆ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದು, ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಸೈಕಲ್ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿ ಕಿಡ್ನಾಪ್ ಮೃತರು ಸಂಕೇಶ್ವರ ಪಟ್ಟಣದ ಖ್ಯಾತ ವೈದ್ಯೆ ಶ್ವೇತಾ ಮುರಗೋಡ(41), ಶಿಯಾ(7)ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಕಾರು ಚಲಾಯಿಸುತ್ತಿದ್ದ ವೈದ್ಯ ಸಚೀನ್ ಮುರಗೋಡೆ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ವೈದ್ಯ ಸಚೀನ್ ಮುರಗೋಡೆ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಬೆಳಗಾವಿ ಕಡೆಯಿಂದ ಸಂಕೇಶ್ವರ ಕಡೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಖ್ಯಾತ ಉದ್ಯಮಿ ಪತ್ನಿ ಜೊತೆ ಸೆಕ್ಸ್ ಎಂಜಯ್ ಮಾಡಿದ್ದೆ – ಪ್ರೀಯಾಂಕಾ ಅಳಿಯನ ವಿವಾದಾತ್ಮಕ ಹೇಳಿಕೆ Sign in to your account
Username or Email Address


Password

 Remember Me


