ಬೆಂಗಳೂರು: ಬಿಜೆಪಿಯಿಂದ ಯಾರೂ ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಮೊದಲೂ ಇರಲಿಲ್ಲ. ಈಗಲೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಕ್ಷಾಂತರದ ಬಗ್ಗೆ ಸ್ಪಷ್ಟಣೆ ನೀಡಿದರು. ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ನಿಖರವಾಗಿ ಹೇಳಬಹುದು. ಬೇರೆ ಪಕ್ಷದಿಂದ ಬಿಜೆಪಿಗೆ ಬರುವವರ ಬಗ್ಗೆ ಕಾಡು ನೋಡಿ ಎಂದರು. ಇದನ್ನೂ ಓದಿ: ನವೀನ್ ದೇಹ ತರುವ ಬಗ್ಗೆ ಮಾತುಕತೆ ನಡೀತಿದೆ: ಬೊಮ್ಮಾಯಿಮಾರ್ಚ್ 30 ಹಾಗೂ 31 ರಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಪ್ರವಾಸದ ಕುರಿತು ಹಾಗೂ ಎಲ್ಲ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ‘ಪಂಚ’ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ- ಬಿಜೆಪಿಯಲ್ಲೂ ‘ಹೈ’ ಆಪರೇಷನ್..!ಅವಧಿ ಪೂರ್ವ ಚುನಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದ ಮುಖ್ಯ ಮಂತ್ರಿಗಳು ಸಂಪುಟ ವಿಸ್ತರಣೆ ಕುರಿತು ವರಿಷ್ಠರಿಂದ ಸೂಚನೆ ಬಂದ ಕೂಡಲೇ ದೆಹಲಿಗೆ ತೆರಳುವುದಾಗಿ ಹೇಳಿದರು. ಇದೇ ವೇಳೆ ಉಕ್ರೇನ್ ನಲ್ಲಿ ಬಾಂಬ್ ದಾಳಿ ನಿಂತ ಕೂಡಲೇ ನವೀನ್ ಮೃತ ದೇಹ ತರುವ ಬಗ್ಗೆ ಪ್ರಕ್ರಿಯೆಗೆ ಪುನಃ ಚಾಲನೆ ನೀಡಲಾಗುವುದು ಎಂದರು.Sign in to your account
Username or Email Address


Password

 Remember Me


