ನೆಲಮಂಗಲ: ಅಪ್ಪು ಕೊನೆಯ ಸಿನಿಮಾ ಜೇಮ್ಸ್ ವಿಶ್ವದಾಖಲೆ ಮಾಡಲೆಂದು 7 ಮಕ್ಕಳ ಜೊತೆಗೆ ಇಲ್ಲೊಂದು ಕುಟುಂಬ ಕಾಲ್ನಡಿಗೆ ಮೂಲಕ ವಿಜಯಪುರದಿಂದ ಬೆಂಗಳೂರು ನಗರಕ್ಕೆ ಬರುತ್ತಿದೆ.ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ ತಿಂಗಳುಗಳೇ ಕಳೆದರೂ ಅಭಿಮಾನಿಗಳು ಒಂದೆಲ್ಲಾ ಒಂದು ರೀತಿಯಲ್ಲಿ ತಮ್ಮ ಅಭಿಮಾನವನ್ನು ತೋರುತ್ತಿದ್ದಾರೆ. ವಿಜಯಪುರದ ಧರೆಪ್ಪ ಅರ್ದಾವೂರ್ ಮತ್ತು ವಿದ್ಯಾರಾಣಿ ದಂಪತಿ ಏಳು ಮಕ್ಕಳ ಜೊತೆಗೆ ಸುಮಾರು 525 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.ಫೆಬ್ರವರಿ 25ರಂದು ಆರಂಭ ಮಾಡಿದ ಪಾದಯಾತ್ರೆ ಇಂದು ನೆಲಮಂಗಲ ಮೂಲಕ ಕಂಠೀರವ ಸ್ಟುಡಿಯೋ ತಲುಪಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಕುಟುಂಬವು ಪಾದಯಾತ್ರೆ ಜೊತೆಗೆ ಜನಜಾಗೃತಿ ಮೂಡಿಸುತ್ತಿದ್ದಾರೆ. ಇದನ್ನೂ ಓದಿ:  ಜಮ್ಮು, ಕಾಶ್ಮೀರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ರಸ್ತೆಯದ್ದಕ್ಕೂ ಪುನೀತ್ ಅಭಿನಯದ ಚಲನಚಿತ್ರ ಗೀತೆಗಳ ಸಾರದೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ. ಇನ್ನೂ ಪುನೀತ್ ರಾಜ್‍ಕುಮಾರ್ ಕನಸಿನಂತೆ ಕನ್ನಡ ಶಾಲೆಗಳ ಅಭಿವೃದ್ಧಿ ಜಾಗೃತಿ ಜಾಥಾ, ಅಂಗಾಂಗಗಳ ದಾನ ಮತ್ತು ನೇತ್ರದಾನ ಕುರಿತು ಜನಜಾಗೃತಿ ಪಾದಯಾತ್ರೆಯುದ್ದಕೂ ಅಭಿಮಾನವನ್ನು ವ್ಯಕ್ತಪಡಿಸಿದ ಕುಟುಂಬ ಇದಾಗಿದೆ. ಇದನ್ನೂ ಓದಿ: ಅತಂತ್ರ ಸ್ಥಿತಿಯಲ್ಲಿರೋ ಉಕ್ರೇನ್ ರಿಟರ್ನ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಾ..?Sign in to your account
Username or Email Address


Password

 Remember Me


