ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಯಾಕೆ ಗೋವಾಕ್ಕೆ ಹೋಗಿದ್ದರೂ ಎನ್ನುವುದು ಇನ್ನೂ ಅರ್ಥವಾಗಿಲ್ಲ, ತೋಳು ಬಲ ತೋರಿಸಲು, ಗೂಂಡಾಗಿರಿ ಮಾಡಲು ಹೋಗಿದ್ರಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ ಮಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದ್ರು ಎಂಬಂತೆ ಕಾಂಗ್ರೆಸ್ ನಡೆಯಾಗಿದೆ. ಫಲಿತಾಂಶ ಬರುವ ಮುನ್ನವೇ ಗೋವಾಕ್ಕೆ ಹೋಗಿ ಗೂಂಡಾಗಿರಿ ಮಾಡಲು ತಯಾರಿ ಮಾಡಿದ್ದರು ಎಂದು ಟೀಕಿಸಿದರು.ಸ್ವಾತಂತ್ರ್ಯ ನಂತರದ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧಿ ಹೇಳಿದ್ದರು. ಅದನ್ನು ರಾಹುಲ್ ಗಾಂಧಿ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಇದು ಖುಷಿಯ ವಿಚಾರವಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ: ನಾರಾಯಣಗೌಡಜಗತ್ತಿಗೆ ಅತಿದೊಡ್ಡ ಪಕ್ಷ ಬಿಜೆಪಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅದ್ಧೂರಿ ಗೆಲುವು ಸಾಧಿಸಿದೆ. ಜಗತ್ತಿನ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ದೇಶದ ಜನರು ಪ್ರಧಾನಿ ಮೋದಿ ಮೇಲೆ ಇಟ್ಟ ವಿಶ್ವಾಸ ಕಂಡು ನಾನು ಬೆರಗಾಗಿದ್ದೇನೆ. ಉತ್ತರಾಖಂಡ ಗೆಲುವಿಗೆ ನಾನೊಬ್ಬನೇ ಕಾರಣ ಅಂತ ಹೇಳುವುದಿಲ್ಲ. ನಾಲ್ಕು ದಿನ ಪ್ರಧಾನಮಂತ್ರಿಗಳು ಉತ್ತರಾಖಂಡವನ್ನು ಭೇಟಿ ನೀಡಿರುವುದೇ ಗೆಲುವಿಗೆ ಕಾರಣವಾಯಿತು. ಜೊತೆಗೆ 80 ಸಾವಿರ ಸಭೆಗಳನ್ನು ಮಾಡಿದ್ದು ಬಿಜೆಪಿಯ ಮೈಲುಗಲ್ಲು ಆಗಿದೆ. ಉತ್ತರಾಖಂಡ ರಾಜ್ಯ ಅಭಿವೃದ್ಧಿ ಕಂಡಿದ್ದು, ಈ ಐದು ವರ್ಷದಲ್ಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಅಧಿವೇಶನ ಮುಗಿದ್ಮೇಲೆ ಸಂಪುಟ ವಿಸ್ತರಣೆ: ಸಂಪುಟ ವಿಸ್ತರಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾಲ್ಕು ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಮುಗಿಸಬೇಕಿದೆ. ಏಪ್ರಿಲ್ 8ರವರೆಗೆ ಅಧಿವೇಶನ ಇದೆ. ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲಿಯವರೆಗೆ ಯಾವುದೇ ಸಂಪುಟ ವಿಸ್ತರಣೆ ಪುನಾರಚನೆ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚೀನಾದಲ್ಲಿ 2 ವರ್ಷಗಳ ಬಳಿಕ ಒಂದೇ ದಿನ 3 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ಉಕ್ರೇನ್ ಹಾಗು ರಷ್ಯಾ ಜೊತೆ ಮತುಕತೆ ನಡೆಸಿ 22 ಸಾವಿರ ಜನರು ಸ್ಥಳಾಂತರ ಮಾಡಿದರು. ಇದು ಮೋದಿ ವ್ಯಕ್ತಿತ್ವದ ಗಟ್ಟಿತನ ತೋರಿಸುತ್ತೇವೆ ಎಂದರು.Sign in to your account
Username or Email Address


Password

 Remember Me


