ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ 4 ತಿಂಗಳು ಕಳೆದರೂ ಅವರ ನೆನಪು ಕನ್ನಡಿಗರ ಮನದಲ್ಲಿ ಅಮರವಾಗಿ ಉಳಿದಿದೆ. ಇದೀಗ ದಿವಂಗತ ನಟ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿವಿ ಯ 102ನೇ ಘಟಿಕೋತ್ಸವದಲ್ಲಿ ಕನ್ನಡದ ಯುವರತ್ನನಿಗೆ ಗೌರವ ಡಾಕ್ಟರೇಟ್  ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ 10 ತಂಡಗಳ ಪೈಕಿ 2 ತಂಡಕ್ಕೆ ಕನ್ನಡಿಗರ ನಾಯಕತ್ವ – ಮೂವರು ನೂತನ ನಾಯಕರ ಎಂಟ್ರಿಪುನೀತ್ ರಾಜ್‌ಕುಮಾರ್‌ರೊಂದಿಗೆ ಒಟ್ಟು ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಹಿರಿಯ ವಿಜ್ಞಾನಿ ಡಾ. ವಿಎಸ್ ಅತ್ರೆ ಹಾಗೂ ಜನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಇದನ್ನೂ ಓದಿ: ಅಪ್ಪು ಬೇಡವೆಂದ ಸಾಂಗ್ ಮತ್ತೆ ಪ್ರೇಕ್ಷಕರ ಮುಂದೆ – ಯಾವುದು ಈ ಸಾಂಗ್?ಈ ಹಿಂದೆ ಪುನೀತ್ ಅಭಿಮಾನಿಗಳು ಅಪ್ಪುಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರು. ಯುವರತ್ನ ತನ್ನ ಸಾವಿನಲ್ಲೂ ನೇತ್ರದಾನ ಮಾಡಿ ಹಲವರಿಗೆ ದೃಷ್ಟಿ ನೀಡಿದ್ದರು. ಇದೀಗ ಅವರ ಸಾವಿರಾರು ಅಭಿಮಾನಿಗಳು ಅಪ್ಪು ನಡೆದಿರುವ ಹಾದಿಯಲ್ಲಿ ನಡೆದು ನೇತ್ರದಾನಕ್ಕೆ ಮುಂದಾಗಿದ್ದಾರೆ.Sign in to your account
Username or Email Address


Password

 Remember Me


