ಮಡಿಕೇರಿ: ಅಳಿವಿನ ಅಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕ ಬಂಧಿಸಿದೆ.ಅಪ್ರೋಜ್ ಪಾಷಾ ಮತ್ತು ಮನ್ಸೂರ್ ಬಂಧಿತ ಆರೋಪಿಗಳಾಗಿದ್ದು, 1 ನಕ್ಷತ್ರ ಆಮೆಯನ್ನು ರಕ್ಷಿಸಲಾಗಿದೆ. ಆರೋಪಿಗಳು ಶುಕ್ರವಾರ ಸಂಜೆ ನಗರದ ಚೈನ್ ಗೇಟ್ ಬಳಿ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಡಿಕೇರಿಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಇದನ್ನೂ ಓದಿ: ಐದು ವರ್ಷಗಳಲ್ಲಿ ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ಸ್ಪರ್ಶದಿಂದ 42 ಕಾರ್ಮಿಕರ ಬಲಿ! ಈ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಂದರ್ಭ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.Sign in to your account
Username or Email Address


Password

 Remember Me


