ಕಲಬುರಗಿ: ಅಫಜಲಪುರ ತಾಲೂಕಿನ ಸುಪ್ರಸಿದ್ಧ ದೇಗುಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದರ್ಶನಕ್ಕೆ ಆಗಮಿಸಿದ ಭಕ್ತರ ಕಾರೊಂದು ಅಪಘಾತಕ್ಕೀಡಾಗಿ ಐವರು ಮೃತಪಟ್ಟ ದುರ್ಘಟನೆ ಬಳೂರ್ಗಿ ಗ್ರಾಮದ ಸಮೀಪ ನಡೆದಿದೆ.ಕಲಬುರಗಿಯ ಬಳೂರ್ಗಿ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಮರಳಿ ಮಹಾರಾಷ್ಟ್ರ ಕಡೆ ಹೊರಟಿದ್ದ ಕಾರು ಏಕಾಏಕಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 4 ಹೆಣ್ಣು ಮಕ್ಕಳು ಹಾಗೂ ಓರ್ವ ಚಾಲಕ ಸೇರಿ 5 ಜನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಕ್ಕಳು ಸೇರಿ ಒಟ್ಟು ಮೂರು ಜನರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಾಯ್‍ಫ್ರೆಂಡ್ ಮುಂದೆಯೇ ಯುವತಿ ಮೇಲೆ ದುಷ್ಕರ್ಮಿಗಳಿಂದ ಅತ್ಯಾಚಾರಮೂವರು ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆದರೆ ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಅಫಜಲಪುರ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್‍ಐ ವಿಶ್ವನಾಥ ಮುದರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.






 Advertisement 




Sign in to your account
Username or Email Address


Password

 Remember Me


