ವಿಜಯನಗರ: ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿಯಲ್ಲಿ ನಡೆದಿದೆ.ಹೆಂಡತಿಯ ಶೀಲದ ಮೇಲೆ ಅನುಮಾನಗೊಂಡ ಪತಿ ದೊಡ್ಡ ಹೊನ್ನೂರಪ್ಪಾ, ಹೆಂಡತಿ ಶಾಂತಮ್ಮ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಕೊಂದು ತಾನೂ ಚಾಕು ಹಾಕಿಕೊಂಡು ಆತ್ಮಹತ್ಯೆ ಯತ್ನ ಮಾಡಿದ್ದಾನೆ. ಘಟನೆಯಲ್ಲಿ ಪತ್ನಿ ಶಾಂತಮ್ಮ ಸ್ಥಳದಲ್ಲೇ ಸಾವಿಗೀಡಾಗಿದ್ದು, ಪತಿ ದೊಡ್ಡ ಹೊನ್ನೂರಪ್ಪ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್ಕಳೆದ ಒಂದು ವರ್ಷಗಳಿಂದ ಪತಿ ದೊಡ್ಡ ಹೊನ್ನೂರಪ್ಪಾ ಹೆಂಡತಿಯ ಜೊತೆ ಆಗಾಗ ಜಗಳವಾಡಿ ಹೆಂಡತಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದೇ ಕಾರಣಕ್ಕೆ ಇಂದು ಸಹ ಮನೆಯಲ್ಲಿ ಮಕ್ಕಳು ಇಲ್ಲದ ಸಮಯದಲ್ಲಿ ಜಗಳಕ್ಕೆ ಇಳಿದಿದ್ದಾನೆ.ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಮಯದಲ್ಲಿ ಕೊಡಲಿಯಿಂದ ಹೆಂಡತಿಯ ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಾನು ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು, ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮತ್ತೆ ಬರ್ತಿದ್ಯ ಬಾಹುಬಲಿ 3 – ಪ್ರಭಾಸ್ ಉತ್ತರವೇನು?Sign in to your account
Username or Email Address


Password

 Remember Me


