ಬೆಂಗಳೂರು: ಮುಂಬೈನ ಭೂಗತ ಲೋಕದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ 45 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.ಇಲಿಯಾಸ್ ಅಬ್ದುಲ್ ಆಸೀಫ್ ಅಲಿಯಾಸ್ ಇಲಿಯಾಸ್ ಬಜ್ಕನಾ ಬಂಧಿತ ಆರೋಪಿ. ಈತನ ವಿರುದ್ಧ ಕೊಲೆ, ಸುಲಿಗೆ, ದರೋಡೆ, ಕೊಲೆ ಪ್ರಯತ್ನ, ಡ್ರಗ್ಸ್ ಮಾಫಿಯಾ ಸೇರಿದಂತೆ 45ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಇನ್ನೋವಾ ಕಾರಲ್ಲಿ ಬಂದು ಕಳ್ಳತನ – ಸಿಸಿಟಿವಿಯಲ್ಲಿ ಶ್ರೀಮಂತ ಕಳ್ಳರ ಕೈಚಳಕ ಸೆರೆಮುಂಬೈ ಪೊಲೀಸರ ಮಾಹಿತಿ ಮೇರೆಗೆ ತಡರಾತ್ರಿ ಅತ್ತಿಬೆಲೆ ಪೊಲೀಸರು ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದರು. ಟಿವಿಎಸ್ ರಸ್ತೆಯ ಸ್ಪಂದನ ಬಾರ್ ಆಂಡ್ ರೆಸ್ಟೋರೆಂಟ್‌ನಲ್ಲಿ ಇಲಿಯಾಸ್ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು?: ವಿಧಾನಸಭೆಯಲ್ಲಿ ಖಾದರ್ ಪ್ರಸ್ತಾಪಬಂಧಿತ ಆರೋಪಿಯನ್ನು ಅತ್ತಿಬೆಲೆ ಪೊಲೀಸರು ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


