ಬೆಳಗಾವಿ: ನಗರದ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್ ಬೆಳಗಾವಿಯಲ್ಲಿ ಭಾರತ – ಜಪಾನ್ ಜಂಟಿ ಸಮರಾಭ್ಯಾಸ ಆರಂಭಿಸಿದ್ದು ಇಂದು ಭಾರತ-ಜಪಾನ್ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ಜರುಗಿತು.ನಗರದ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್‍ಯಲ್ಲಿ ಫೆಬ್ರವರಿ 27ರಿಂದ ನಡೆಯುತ್ತಿರುವ ಭಾರತ ಜಪಾನ್ ಜಂಟಿ ಸಮರಾಭ್ಯಾಸ ಮಾರ್ಚ್ 10ರವರೆಗೆ ನಡೆಯಲಿದೆ. ಇಂದಿನ ಮೂರು ದಿನಗಳ ಕಾಲ ಭಾರತ ಜಪಾನ್ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ಕೂಡ ನಡೆಯುತ್ತಿದೆ. ವಾರ್ಷಿಕ ತರಬೇತಿ ಭಾಗವಾಗಿರುವ ‘ಧರ್ಮ ಗಾರ್ಡಿಯನ್ 2022’ ಕಾರ್ಯಕ್ರಮ ಇದ್ದಾಗಿದ್ದು 2018ರಿಂದಲೂ ಜಂಟಿ ಸಮರಾಭ್ಯಾಸ ಕಾರ್ಯಕ್ರಮ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಪಡೆಗೆ ಸೇರಿದ ತಮಿಳುನಾಡಿನ ಯುವಕಭಾರತೀಯ ಸೇನೆಯ 15ನೇ ಬೆಟಾಲಿಯನ್‍ನ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್ ಹಾಗೂ ಜಪಾನ್ ಗ್ರೌಂಡ್ ಸೆಲ್ಫ್ ಡಿಫೆನ್ಸ್ ಫೋರ್ಸ್‍ನ 30ನೇ ದಳದ ಯುದ್ಧ ಅನುಭವಿ ಪಡೆಗಳು ಸಮರಾಭ್ಯಾಸದಲ್ಲಿ ಭಾಗಿಯಾಗಿವೆ. ಸಮರಾಭ್ಯಾಸದಲ್ಲಿ ಜಾಗತಿಕ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಅನುಕೂಲಕರವಾಗುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯಲಿದೆ. ಇದರ ಜೊತೆಗೆ ಕಾಡು, ಅರೆ ನಗರ, ನಗರ ಪ್ರದೇಶಗಳಲ್ಲಿನ ಕಾರ್ಯಾಚರಣೆಯ ಪ್ಲಟೂನ್ ಮಟ್ಟದ ತರಬೇತಿ ಕಾರ್ಯಕ್ರಮ, ಮನೆಗಳ ಮೇಲಿನ ಡ್ರಿಲ್‍ಗಳು, ಭಯೋತ್ಪಾದಕ ಹಡಗು ತಾಣಗಳ ಮೇಲೆ ದಾಳಿ ನಡೆದಾಗ ಕೈಗೊಳ್ಳಬೇಕಾದ ಕಾರ್ಯಾಚರಣೆಯ ತರಬೇತಿ ಸೇರಿದಂತೆ ನಿರಾಯುಧ ಯುದ್ಧ ಸೇರಿ ವಿವಿಧ ಹಂತದ ಕಾರ್ಯಾಚರಣೆಗಳ ಅಣಕು ಪ್ರದರ್ಶನ ನಡೆಯಲಿದೆ.  ಇದನ್ನೂ ಓದಿ: ವಿಶ್ವ ಯುದ್ಧ ನಂತ್ರ ಫಸ್ಟ್ ಟೈಂ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರSign in to your account
Username or Email Address


Password

 Remember Me


