ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 229ಕ್ಕೆ ಇಳಿಕೆ ಕಂಡಿದೆ. ಇಂದು ಒಟ್ಟು 3 ಮರಣ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದ ಪಾಸಿಟಿವಿಟಿ ರೇಟ್ 0.47%ಕ್ಕೆ ಮತ್ತು ಮರಣ ಪ್ರಮಾಣ 1.31%ಗೆ ಇಳಿಕೆ ಕಂಡಿದೆ.ಬೆಂಗಳೂರು ನಗರದಲ್ಲಿ ಒಟ್ಟು 146 ಪಾಸಿಟಿವ್ ಕೇಸ್ ಮತ್ತು 2 ಮರಣ ಪ್ರಕರಣ ದಾಖಲಾಗಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,425ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 2 ಮತ್ತು ಕಲಬುರಗಿಯಲ್ಲಿ ಏಕೈಕ ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪ್ಪು ಸರ್ ಧ್ವನಿಯನ್ನ ಉಳಿಸಿಕೊಳ್ಳೋಕೆ ಆಗಲಿಲ್ಲ- ನಿರ್ದೇಶಕ ಚೇತನ್ ಭಾವುಕರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,248ಕ್ಕೆ ಇಳಿಕೆ ಕಂಡಿದೆ. ಒಟ್ಟು 264 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,42,575 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,99,298 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 13,384 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 48,310 ಸ್ಯಾಂಪಲ್ (ಆರ್‌ಟಿಪಿಸಿಆರ್ 37,584 + 10,726 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನನ್ನ ಮಗಳನ್ನ ಜೀವಂತವಾಗಿ ನೋಡ್ತೀನಿ ಅಂದ್ಕೊಂಡಿರಲಿಲ್ಲ – ವಿದ್ಯಾರ್ಥಿನಿ ತಂದೆ ಕಣ್ಣೀರುಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 146, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 5, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 5, ಕೋಲಾರ 0, ಕೊಪ್ಪಳ 2, ಮಂಡ್ಯ 2, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 6, ತುಮಕೂರು 13, ಉಡುಪಿ 2, ಉತ್ತರ ಕನ್ನಡ 3, ವಿಜಯಪುರ ಮತ್ತು ಯಾದಗಿರಿಯಲ್ಲಿ ಏಕೈಕ ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


