ಜಗ್ಗೇಶ್ ನಟನೆಯ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಶೂಟಿಂಗ್ ಸದ್ದಿಲ್ಲದೇ ಬಹುತೇಕ ಮುಗಿದಿದೆ. ಕೊನೆಯ ದಿನದ ಶೂಟಿಂಗ್ ಮುಗಿಸಿ ಕುಂಬಳಕಾಯಿ ಒಡೆದುಕೊಂಡು ವಾಪಸ್ಸು ಬೆಂಗಳೂರಿಗೆ ಬಂದಿರುವ ಚಿತ್ರತಂಡ, ಡಬ್ಬಿಂಗ್ ಕೆಲಸಕ್ಕೂ ಕೈ ಹಾಕಿದೆ. ತಮ್ಮ ಪಾತ್ರಕ್ಕೆ ಡಬ್ಬಿಂಗ್ ಕೂಡ ಮುಗಿಸಿರುವ ಜಗ್ಗೇಶ್, ಇದೀಗ ಮತ್ತೊಂದು ಸಿನಿಮಾದ ಶೂಟಿಂಗ್ ಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ : ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊದಲ ಬಾರಿಗೆ ಜಗ್ಗೇಶ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ ಸಂತೋಷ್ ಆನಂದ್ ರಾಮ್. ಇದನ್ನೂ ಓದಿ : ತಮಿಳಿನತ್ತ ಲವ್ ಗುರು ನಿರ್ದೇಶಕ ಪ್ರಶಾಂತ್ ರಾಜ್ಈ ಸಿನಿಮಾದಲ್ಲಿ ಜಗ್ಗೇಶ್ ಹೋಟೆಲ್ ಮಾಲೀಕನ ಪಾತ್ರ ಮಾಡುತ್ತಿದ್ದಾರಂತೆ. ಹೋಟೆಲ್ ಗೂ ನಾಯಕನ ಬದುಕಿಗೂ ಇರುವ ಸಂಬಂಧವನ್ನು ಈ ಸಿನಿಮಾ ಹೇಳಲಿದೆಯಂತೆ. ಇದೇ ಮೊದಲ ಬಾರಿಗೆ ಇಥಂದ್ದೊಂದು ಪಾತ್ರವನ್ನು ನಿರ್ವಹಿಸಿರುವ ಜಗ್ಗೇಶ್, ಇಡೀ ಸಿನಿಮಾವನ್ನು ಆವರಿಸಿಕೊಂಡಿದ್ದಾರಂತೆ. ಇದನ್ನೂ ಓದಿ : ಸಾಯಿ ಪಲ್ಲವಿಗೆ ‘ಸಾಯಿ’ ಹೆಸರು ಬಂದಿದ್ದು ಹೇಗೆ?ನಾಯಕನ ಪಾತ್ರದಲ್ಲಿ ಜಗ್ಗೇಶ್ ಕಾಣಿಸಿಕೊಂಡರೆ, ನಾಯಕಿಯಾಗಿ ಶ್ವೇತಾ ಶ್ರೀವಾತ್ಸವ್ ಪಾತ್ರ ನಿರ್ವಹಿಸಿದ್ದಾರೆ. ಕೆಜಿಎಫ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ ಈ ಸಿನಿಮಾಗೆ ಬಂಡವಾಳ ಹೂಡಿದ್ದು, ಕೆಜಿಎಫ್ ನಂತರ ಈ ಸಿನಿಮಾ ತೆರೆ ಕಾಣಲಿದೆ.Sign in to your account
Username or Email Address


Password

 Remember Me


