ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಮರಣ ಪ್ರಮಾಣ ಇಳಿಕೆ ಕಾಣುತ್ತಿದೆ. ಇಂದು ಒಟ್ಟು 278 ಕೇಸ್ ದಾಖಲಾಗಿದ್ದು, 3 ಮರಣ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದ ಪಾಸಿಟಿವಿಟಿ ರೇಟ್ 0.53%ಕ್ಕೆ ಮತ್ತು ಮರಣ ಪ್ರಮಾಣ 1.07%ಗೆ ಇಳಿಕೆ ಕಂಡಿದೆ.ಬೆಂಗಳೂರು ನಗರದಲ್ಲಿ ಒಟ್ಟು 182 ಪಾಸಿಟಿವ್ ಕೇಸ್ ಮತ್ತು 1 ಮರಣ ಪ್ರಕರಣ ದಾಖಲಾಗಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,419ಕ್ಕೆ ತಲುಪಿದೆ. ಇದನ್ನೂ ಓದಿ: ಹರ್ಷ ಕೇಸ್‍ನ ಪ್ರಮುಖ ಆರೋಪಿಗಳು ಅರೆಸ್ಟ್: ಆರಗ ಜ್ಞಾನೇಂದ್ರರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆ ಕಂಡಿದೆ. ಒಟ್ಟು 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,42,346 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,99,034 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 99,061 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 52,215 ಸ್ಯಾಂಪಲ್ (ಆರ್‌ಟಿಪಿಸಿಆರ್ 41,113 + 11,102 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೃತ ನವೀನ್ ಕುಟುಂಬಕ್ಕೆ ಸಾಂತ್ವನ ಹೇಳಿ 25 ಲಕ್ಷ ರೂ. ಚೆಕ್ ಕೊಟ್ಟ ಸಿಎಂಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 182, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 4, ಹಾವೇರಿ 4, ಕಲಬುರಗಿ 8, ಕೊಡಗು 7, ಕೋಲಾರ 4, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 14, ತುಮಕೂರು 5, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


