ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಹು ನಿರೀಕ್ಷಿತ ‘ಜೇಮ್ಸ್’ ಸಿನಿಮಾಗೆ ಸೆನ್ಸಾರ್ ಮಂಡಳಿ ‘ಯುಎ’ ಸರ್ಟಿಫಿಕೇಟ್ ಕೊಟ್ಟಿದೆ.ಚಂದನವನದ ‘ಜೇಮ್ಸ್’ ಸಿನಿಮಾ ನೋಡಬೇಕು ಎಂದು ಕನ್ನಡಿಗರು ಮಾತ್ರವಲ್ಲ, ಇಡೀ ವಿಶ್ವದ ಜನರೇ ಕಾಯುತ್ತಿದ್ದಾರೆ. ಜೇಮ್ಸ್’ ಸಿನಿಮಾದ ಪ್ರತಿಯೊಂದು ಅಪ್ಡೇಟ್‍ಗಳನ್ನು ಕೇಳಿಸಿಕೊಳ್ಳಲು ಎಲ್ಲರೂ ಕಾತುರದಿಂದ ಕಾಯುತ್ತಿರುತ್ತಾರೆ. ಈಗ ಜೇಮ್ಸ್ ಸಿನಿಮಾದ ಕನ್ನಡ ಅವತರಣಿಕೆಯ ಸೆನ್ಸಾರ್ ಇಂದು ಮುಗಿದಿದೆ. ಇದನ್ನೂ ಓದಿ: ಗೂಗಲ್ ಮ್ಯಾಪ್‍ನಲ್ಲಿ ಕೆಜಿಎಫ್ ಮೂವೀ ಲೋಕೆಶನ್!ಸಿನಿಮಾದಲ್ಲಿ ಯಾವುದೇ ದೃಶ್ಯಗಳನ್ನು ಕಟ್ ಮಾಡದೆ ಸೆನ್ಸಾರ್ ಮಂಡಳಿಯು ‘ಯುಎ’ ಸರ್ಟಿಫಿಕೇಟ್ ಕೊಟ್ಟಿದೆ. ಅಲ್ಲದೇ ಸಿನಿಮಾ ತುಂಬಾ ಚೆನ್ನಾಗಿದೆ ಎಂದು ಸೆನ್ಸಾರ್ ಮಂಡಳಿಯು ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಈ ಕುರಿತು ನಿರ್ದೇಶಕ ಚೇತನ್ ಮತ್ತು ನಿರ್ಮಾಪಕ ಕಿಶೋರ್ ಅವರು ಸಿನಿಮಾ ಬಗ್ಗೆ ಸೆನ್ಸಾರ್ ಮಂಡಳಿ ಕೊಟ್ಟ ಅಭಿಪ್ರಾಯವನ್ನು ತಿಳಿಸಿದ್ದು, ಅಭಿಮಾನಿಗಳಲ್ಲಿ ಮುಂದೆಯೂ ಇದೇ ರೀತಿ ಬೆಂಬಲ ನೀಡಿ ಎಂದು ಕೇಳಿಕೊಂಡಿದ್ದಾರೆ.ನಾಳೆ 4 ಗಂಟೆಗೆ ಮಠ ಗುರುಪ್ರಸಾದ್ ನಿರ್ದೇಶನದ ‘ಎದ್ದೇಳು ಮಂಜುನಾಥಾ -2’ ಮಲ್ಲೇಶ್ವರಂನ ರೇಣುಕಾಂಬ ಥಿಯಟ್ರಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಇದು ಮುಗಿದ ನಂತರ ಸಂಜೆ 7 ಗಂಟೆಗೆ ‘ಜೇಮ್ಸ್’ ಸಿನಿಮಾ ಸುದ್ದಿಗೋಷ್ಠಿ ನಡೆಯಲಿದೆ. ಈ ಸುದ್ದಿಗೋಷ್ಠಿ ಆಶೋಕ್ ಹೋಟೆಲ್‍ನಲ್ಲಿ ನಡೆಯಲಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮುಖ್ಯ ಅತಿಥಿಯಾಗಿ ಬರಲಿದ್ದಾರೆ. ಇದನ್ನೂ ಓದಿ: ಮಜಾಟಾಕೀಸ್ ರಾಣಿಯ ಸ್ನೇಹಿತೆ ಉಕ್ರೇನ್ ನಲ್ಲಿ ಕಳೆದ 10 ದಿನಗಳು: ಶ್ವೇತಾ ಚೆಂಗಪ್ಪ ಬಿಚ್ಚಿಟ್ಟ ರಹಸ್ಯSign in to your account
Username or Email Address


Password

 Remember Me


