ಗೌರಿ ಲಂಕೇಶ್ ಹತ್ಯ ಬಳಿಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಸರ್ಕಾರ ಹಿಂಪಡೆದಿದೆ. ಈ ನಡೆಗೆ ಅವರು ಅಸಮಾಧಾನವನ್ನು ವ್ಯಕ್ತ ಪಡಿಸಿದ್ದಾರೆ. ತಮಗೆ ಈಗಲೂ ಜೀವಕ್ಕೆ ಅಪಾಯವಿದ್ದರೂ, ಗನ್ ಮ್ಯಾನ್ ಹಿಂಪಡೆದಿದ್ದಕ್ಕಾಗಿ ಚೇತನ್, ಶುಕ್ರವಾರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿ ಮಾಡಿದರು. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!ಈ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್, “ನನಗೆ ಈಗಲೂ ಜೀವ ಬೆದರಿಕೆ ಇದೆ. ಗೌರಿ ಲಂಕೇಶ್ ಹತ್ಯ ಬಳಿಕೆ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಏಕಾಏಕಿ ಹಿಂಪಡೆದಿದ್ದಾರೆ. ಹಾಗಾಗಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ, ಗನ್ ಮ್ಯಾನ್ ವಾಪಸ್ಸು ಕಳುಹಿಸುವಂತೆ ಮನವಿ ಮಾಡಿದ್ದೇನೆ’ ಎಂದರು. ಇದೇ ಸಂದರ್ಭದಲ್ಲಿಯೇ ಅವರು ತಮ್ಮ ಮನೆಯ ಹತ್ತಿರ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸುವಂತೆಯೂ ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರುನ್ಯಾಯಾಧೀಶರ ಬಗ್ಗೆ ಅವಹೇಳನ ರೀತಿಯಲ್ಲಿ ಟ್ವಿಟ್ ಮಾಡಿದ್ದ ಚೇತನ್, 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಅವರಿಗೆ ಜಾಮೀನು ಸಿಕ್ಕಿತ್ತು. ಜೈಲಿನಿಂದ ಆಚೆ ಬಂದ ಮೇಲೂ ತಾವು ಪ್ರಶ್ನಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ, ಅವರ ಮೇಲೆ ಇನ್ನೂ ಎರಡು ಕೇಸ್‍ಗಳು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಈ ಎಲ್ಲದರ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಸೆಕ್ಯುರಿಟಿಯನ್ನು ಸರ್ಕಾರ ಹಿಂಪಡೆದಿದೆ ಎನ್ನಲಾಗುತ್ತಿದೆ.Sign in to your account
Username or Email Address


Password

 Remember Me


