ಮಾ.3 ರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಇಂದು ಪುನೀತ್ ರಾಜ್ ಕುಮಾರ್ ಗಾಗಿಯೇ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿತ್ತು. ಪುನೀತ್ ಸ್ಮರಣೆಯ ಜತೆಗೆ ಪುನೀತ್ ಅವರ ಜತೆ ಕೆಲಸ ಮಾಡಿದ ನಿರ್ದೇಶಕರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ವೇದಿಕೆ ಕಲ್ಪಿಸಲಾಗಿತ್ತು. ಇದನ್ನೂ ಓದಿ : ತಮಿಳಿನತ್ತ ಲವ್ ಗುರು ನಿರ್ದೇಶಕ ಪ್ರಶಾಂತ್ ರಾಜ್ಪುನೀತ್ ರಾಜ್ ಕುಮಾರ್ ನಟನೆಯ ಚಿತ್ರಗಳಿಗೆ ನಿರ್ದೇಶನ ಮಾಡಿರುವ ಪವನ್ ಒಡೆಯರ್, ಸಂತೋಷ್ ಆನಂದ್ ರಾಮ್, ಚೇತನ್ ಕುಮಾರ್ ಮತ್ತು ಹಿರಿಯ ನಿರ್ದೇಶಕ ಭಗವಾನ್, ಪುನೀತ್ ಅವರ ಜತೆಗಿನ ತಮ್ಮ ಒಡನಾಟವನ್ನು ಬಿಚ್ಚಿಟ್ಟರು. ಒಂದು ರೀತಿಯಲ್ಲಿ ಈ ಕಾರ್ಯಕ್ರಮ ಭಾವುಕತೆಯಿಂದಲೇ ಶುರುವಾಗಿ, ಭಾವುಕತೆಯಿಂದಲೇ ಮುಕ್ತಾಯವಾಯಿತು. ಇದನ್ನೂ ಓದಿ : ಸಾಯಿ ಪಲ್ಲವಿಗೆ ‘ಸಾಯಿ’ ಹೆಸರು ಬಂದಿದ್ದು ಹೇಗೆ?ಪುನೀತ್ ನಟನೆಯ ಚಿತ್ರಗಳನ್ನು ವಿಶ್ಲೇಷಿಸುವುದರ ಜತೆಗೆ ಅವರು ಪಾತ್ರಕ್ಕಾಗಿ ಮಾಡಿಕೊಳ್ಳುತ್ತಿದ್ದ ತಯಾರಿ, ಅವರಿಗಾಗಿಯೇ ಪಾತ್ರಗಳನ್ನು ಬರೆಯುತ್ತಿದ್ದ ರೀತಿ ಮತ್ತು ಅವರು ಶೂಟಿಂಗ್ ಸೆಟ್ ನಲ್ಲಿ ಹೇಗೆಲ್ಲ  ಇರುತ್ತಿದ್ದರು ಎನ್ನುವ ಕುರಿತು ನಿರ್ದೇಶಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಕೂಡ ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


