ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ ಕಾಣುತ್ತಿದೆ. ಇಂದು 23 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಕೇಸ್ ದಾಖಲಾಗಿದೆ. ಉಳಿದಂತೆ 6 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾದರೆ, ಬೆಂಗಳೂರಿನಲ್ಲಿ ಮಾತ್ರ 163 ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 233 ಕೇಸ್ ದಾಖಲಾಗಿದ್ದು, 6 ಮರಣ ಪ್ರಕರಣ ದಾಖಲಾಗಿದೆ.ಬೆಂಗಳೂರು ನಗರದಲ್ಲಿ ಒಟ್ಟು 163 ಪಾಸಿಟಿವ್ ಕೇಸ್ ಮತ್ತು 2 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.48%ಕ್ಕೆ ಇಳಿಕೆ ಕಂಡಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,469ಕ್ಕೆ ತಲುಪಿದೆ. ಇದನ್ನೂ ಓದಿ: Karnataka Budget: ತವರು ಜಿಲ್ಲೆಗೆ 15 ಕಾರ್ಯಕ್ರಮಗಳನ್ನು ಘೋಷಿಸಿದ ಸಿಎಂಮರಣ ಪ್ರಮಾಣ 2.57ರಷ್ಟಿದೆ. ಒಟ್ಟು 648 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,42,068 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,98,576 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 1,20,795 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 48,467 ಸ್ಯಾಂಪಲ್ (ಆರ್​ಟಿಪಿಸಿಆರ್ 35,231 + 13,236 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ.: ಬೊಮ್ಮಾಯಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 163, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 0, ಚಿತ್ರದುರ್ಗ 3, ದಕ್ಷಿಣ ಕನ್ನಡ 2, ದಾವಣಗೆರೆ 2, ಧಾರವಾಡ 2, ಗದಗ 3, ಹಾಸನ 1, ಹಾವೇರಿ 2, ಕಲಬುರಗಿ 5, ಕೊಡಗು 1, ಕೋಲಾರ 4, ಕೊಪ್ಪಳ 0, ಮಂಡ್ಯ 1, ಮೈಸೂರು 9, ರಾಯಚೂರು 2, ರಾಮನಗರ 0, ಶಿವಮೊಗ್ಗ 7, ತುಮಕೂರು 5, ಉಡುಪಿ 5, ಉತ್ತರ ಕನ್ನಡ 7, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


