ರಾಯಚೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಮಂತ್ರಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.ರಾಯರ ಪಟ್ಟಾಭಿಷೇಕ ಹಾಗೂ ಜನ್ಮದಿನಾಚರಣೆಯನ್ನ ಗುರುವೈಭವೋತ್ಸವವಾಗಿ ಆಚರಣೆ ಮಾಡಲಾಗುತ್ತೆ. ಈ ಹಿನ್ನೆಲೆ ಇಂದು ರಾಯರ 401ನೇ ಪಟ್ಟಾಭಿಷೇಕವಾಗಿದ್ದು, ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದರು. ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದ ನಂತರ ರಾಯರ ಬೃಂದಾವನದ ದರ್ಶನವನ್ನು ಮೊದಲು ಪಡೆದಿದ್ದಾರೆ. ಬಳಿಕ ಕಿಚ್ಚನಿಗೆ ವೇದಿಕೆ ಕಾರ್ಯಕ್ರಮದಲ್ಲಿ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸನ್ಮಾನ ಮಾಡಿದ್ದಾರೆ. ಇದನ್ನೂ ಓದಿ: ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!ಭಕ್ತರು ಮತ್ತು ಕಿಚ್ಚನ ಅಭಿಮಾನಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಮಂತ್ರಾಲಯದಲ್ಲಿ ನೆರೆದಿದ್ದರು. ಈ ವೇಳೆ ಕಿಚ್ಚನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಗುರುವೈಭವೋತ್ಸವ ಹಿನ್ನೆಲೆ ಮಠದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ನಡೆಯಿತು.Sign in to your account
Username or Email Address


Password

 Remember Me


