ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಅದ್ಧೂರಿಯಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಕಿರೀಟಿ ಪಟ್ಟಾಭಿಷೇಕಕ್ಕಾಗಿ ಜನಾರ್ದನ ರೆಡ್ಡಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಹೆಸರಾಂತ ನಿರ್ಮಾಣ ಸಂಸ್ಥೆಯು ಈ ಚಿತ್ರವನ್ನು ನಿರ್ಮಾಣ ಮಾಡಲು ಮುಂದೆ ಬಂದಿದ್ದು, ಇಂದು ಅಧಿಕೃತವಾಗಿ ಕಿರೀಟಿ ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ. ಅದಕ್ಕಾಗಿ ಕಾರ್ಯಕ್ರವೂ ರೆಡಿಯಾಗಿದೆ. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾಸಿನಿಮಾರಂಗಕ್ಕೆ ಲಾಂಚ್ ಆಗುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೆಸರಾಂತ ನಿರ್ದೇಶಕ ರಾಜಮೌಳಿ ಬೆಂಗಳೂರಿಗೆ ಆಗಮಿಸುತ್ತಾರೆ. ಜತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಭಾಗಿಯಾಗಲಿದ್ದಾರೆ. ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು ಮತ್ತು ನಿರ್ದೇಶಕರನ್ನು ಈ ಕಾರ್ಯಕ್ರಮಕ್ಕಾಗಿ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ : ರವಿಚಂದ್ರನ್ ಸಿನಿಮಾ ಹಿರೋಯಿನ್ ಈಗ ನಿರ್ದೇಶಕಿಕಿರೀಟಿ ಪಕ್ಕಾ ತಯಾರಿ ಮಾಡಿಕೊಂಡೆ ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಸಾಹಸ ಕಲೆಗಳನ್ನು ಕಲಿತಿದ್ದಾರಂತೆ. ನುರಿತ ನಿರ್ದೇಶಕರಿಂದಲೇ ನಟನಾ ತರಬೇತಿ ಕೂಡ ಪಡೆದಿದ್ದಾರೆ. ಎಲ್ಲ ತಯಾರಿ ಮಾಡಿಕೊಂಡೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ : ಮಾರ್ಚ್ 27ಕ್ಕೆ ಕೆಜಿಎಫ್ 2 ಟ್ರೈಲರ್ ರಿಲೀಸ್ಸಿನಿಮಾ ರಂಗಕ್ಕೆ ಬರುತ್ತಿರುವ ಕಿರೀಟಿ, ಓದಿನಲ್ಲೂ ಹಿಂದೆ ಬಿದ್ದಿಲ್ಲ. ಲಂಡನ್ ನಲ್ಲಿ ರಾಜಕೀಯ ಶಾಸ್ತ್ರ ಮತ್ತು ಬ್ಯುಸಿನೆಸ್ ಮ್ಯಾನೇಜಮೆಂಟ್ ಕುರಿತಾಗಿ ಪದವಿ ಮಾಡಿದ್ದಾರೆ. ಪದವಿ ಮುಗಿಸಿಕೊಂಡೇ ಸಿನಿಮಾ ಮೇಲಿನ ಆಸಕ್ತಿಯಿಂದ ಚಿತ್ರರಂಗ ಪ್ರವೇಶ ಮಾಡಿದ್ದಾರೆ.Sign in to your account
Username or Email Address


Password

 Remember Me


