ಬೆಂಗಳೂರು: ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಭಿವೃದ್ಧಿ ಪಡಿಸಲು ಬಜೆಟ್‍ನಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.* ಪ್ರವಾಸೋದ್ಯಮ ಅಭಿವೃದ್ಧಿ ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು-ಹಳೇಬೀಡು ಪ್ರವಾಸಿ ವೃತ್ತವನ್ನಾಗಿ ಅಭಿವೃದ್ಧಿಗೆ ಕ್ರಮ. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ* ಶ್ರೀರಂಗಪಟ್ಟಣ, ಬೇಲೂರು, ಹಳೇಬೀಡು, ಸೋಮನಾಥಪುರಗಳನ್ನು ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.
* ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‍ವೇ ಅಭಿವೃದ್ಧಿ.
* ನಂದಿ ಬೆಟ್ಟದಲ್ಲಿ 93 ಕೋಟಿ ರೂ. ವೆಚ್ಚದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಅನುಮೋದನೆ.
* ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕ್ರಮ.* ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ.
* ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ.
* ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿ.ಆರ್.ಜಡ್ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮ.* ತದಡಿ ಬಂದರಿನಲ್ಲಿ ಸಮಗ್ರ ಪರಿಸರ-ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ.
* ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ.
* ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು Adopt a Monument ಯೋಜನೆ ಜಾರಿ.
* ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಾಗೂ ಚಿಕ್ಕಮಗಳೂರಿನ ಮುಳ್ಳಯ್ಯಗಿರಿ ದತ್ತಪೀಠ ಬೆಟ್ಟದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೋಪ್‍ವೇ ನಿರ್ಮಾಣ ಮಾಡಲು ಕೇಂದ್ರ ಸರ್ಕಾರದ “ಪರ್ವತಮಾಲಾ” ಯೋಜನೆಯಡಿ ಪ್ರಸ್ತಾವನೆಯನ್ನು ಸಲ್ಲಿಕೆ






 Advertisement 




Sign in to your account
Username or Email Address


Password

 Remember Me


