ತಮಿಳಿನ ಖ್ಯಾತ ನಟ, ರಜನಿಕಾಂತ್ ಅಳಿಯ ಧನುಷ್ ಅವರ ಹೊಸ ಸಿನಿಮಾ ‘ಮಾರನ್’ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇಂದು ಬಿಡುಗಡೆಯಾದ ಸಿನಿಮಾದ ಟ್ರೈಲರ್ ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ. ಈ ಹೊತ್ತಿನಲ್ಲಿ ಅಭಿಮಾನಿಗಳಿಗೆ ನಿರಾಸೆಯ ಸುದ್ದಿಯೊಂದನ್ನು ಕೊಟ್ಟಿದೆ ಚಿತ್ರತಂಡ. ಮಾರನ್ ಸಿನಿಮಾ ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಆಗುತ್ತಿದ್ದು, ಥಿಯೇಟರ್ ನಲ್ಲಿ ನೋಡುವ ಅವಕಾಶ ಈ ಬಾರಿ ಅಭಿಮಾನಿಗಳಿಗೆ ಸಿಗುವುದಿಲ್ಲ. ಇದನ್ನೂ ಓದಿ : ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಅಪ್ಡೇಟ್ : ಯಾವಾಗ, ಏನು ಅಂತ ನೋಡ್ಕೊಂಡ್ ಬಿಡಿಧನುಷ್ ನಟನೆಯ ಸಿನಿಮಾಗಳು ಹೆಚ್ಚಾಗಿ ಚಿತ್ರಮಂದಿರಗಳಲ್ಲೇ ತೆರೆಕಂಡಿವೆ. ಬಾಕ್ಸ್ ಆಫೀಸು ತುಂಬಿಸಿವೆ. ಇದೇ ಮೊದಲ ಬಾರಿಗೆ ಇವರ ಸಿನಿಮಾ ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ.  ಕೋವಿಡ್ ನಂತರದಲ್ಲಿ ಸಾಕಷ್ಟು ಭಾರೀ ಬಜೆಟ್ ಚಿತ್ರಗಳು ನೇರವಾಗಿ ಓಟಿಟಿಯಲ್ಲೇ ರಿಲೀಸ್ ಆಗಿದ್ದರಿಂದ, ಚಿತ್ರಮಂದಿರಗಳಿಗೆ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ : ಖ್ಯಾತ ಗಾಯಕ ಮಿಕಾ ಸಿಂಗ್ ಸ್ವಯಂವರ : ನೀವೂ ಭಾಗಿಯಾಗಬಹುದುಈ ಚಿತ್ರದಲ್ಲಿ ಧನುಷ್ ತನಿಖಾ ಪತ್ರಕರ್ತನ ಪಾತ್ರ ಮಾಡುತ್ತಿದ್ದು ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಕಾರ್ತಿಕ್ ನರೇನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾ ಇದಾಗಿದ್ದು, ಧನುಷ್ ಜತೆ ನಾಯಕಿಯಾಗಿ ಮಾಳವಿಕಾ ಮೋಹನ್ ನಟಿಸುತ್ತಿದ್ದಾರೆ.Sign in to your account
Username or Email Address


Password

 Remember Me


