ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ಇಂದು ಒಟ್ಟು 202 ಕೇಸ್ ದಾಖಲಾಗಿದ್ದು, 7 ಮರಣ ಪ್ರಕರಣ ದಾಖಲಾಗಿದೆ.ಕೆಲದಿನಗಳಿಂದ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡರೂ, ಮರಣ ಪ್ರಕರಣ ಕಡಿಮೆಯಾಗಿರಲಿಲ್ಲ. ಇಂದು ಮರಣ ಪ್ರಕರಣ ಕೂಡ ಇಳಿಕೆ ಕಂಡಿದೆ. ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.3.47% ರಷ್ಟಿದೆ. ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ಕಲಬುರಗಿ, ಕೊಡಗು, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ಯಾದಗಿರಿಯಲ್ಲಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 0.52%ಕ್ಕೆ ಇಳಿಕೆ ಕಂಡಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 4,847ಕ್ಕೆ ಇಳಿಮುಖಗೊಂಡಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಇಂದು ಒಟ್ಟು 150 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 3 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನವೀನ್ ಸಾವು ಬಹಳ ದುಃಖ ತರಿಸಿದೆ – ಸಿಎಂ ಭಾವುಕಒಟ್ಟು 971 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,41,265 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,96,423 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 32,058 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 38,390 ಸ್ಯಾಂಪಲ್ (ಆರ್‌ಟಿಪಿಸಿಆರ್ 23,304 + 15,086 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರುಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 150, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ದಾವಣಗೆರೆ 4, ಧಾರವಾಡ 0, ಗದಗ 3, ಹಾಸನ 2, ಹಾವೇರಿ 0, ಕಲಬುರಗಿ 0, ಕೊಡಗು 0, ಕೋಲಾರ 1, ಕೊಪ್ಪಳ 0, ಮಂಡ್ಯ 0, ಮೈಸೂರು 6, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 10, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ 2 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


