ಮಾಜಿ ಮಂತ್ರಿ, ಉದ್ಯಮಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೋ ಆಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಇವರ ಚೊಚ್ಚಲ ಚಿತ್ರವನ್ನು ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿರುವುದು ವಿಶೇಷ. ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ಹೈ ಬಜೆಟ್ ಹಾಗೂ ಕಂಟೆಂಟ್ ಸಿನಿಮಾಗಳನ್ನು ತಯಾರಿಸುತ್ತಾ ಬಂದಿರುವ ಈ ಸಂಸ್ಥೆಯು ರಾಧಾ ಕೃಷ್ಣ ಸಾರಥ್ಯದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ರೆಡ್ಡಿ ಪುತ್ರನ ಸಿನಿಮಾ ನಿರ್ಮಾಣ ಮಾಡುತ್ತಿದೆ. ಮಾರ್ಚ್ 4 ರಂದು ಚಿತ್ರದ ಅದ್ಧೂರಿ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ : ಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ವಾಸ್ಕೋಡಿಗಾಮನ ಕಥೆಇನ್ನೂ ಹೆಸರಿಡದ ಈ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗುತ್ತಿದ್ದು, ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರನ್ನು ಈ ಸಿನಿಮಾದ ಭಾಗವಾಗಿದ್ದಾರೆ ಎಂದಿದೆ ನಿರ್ಮಾಣ ಸಂಸ್ಥೆ. ಇದನ್ನೂ ಓದಿ : ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಲಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣವನ್ನು ವಹಿಸಲಿದ್ದಾರೆ. ರವೀಂದರ್ ಆರ್ಟ್ ಡೈರೆಕ್ಟರ್ ಆಗಿ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನೃತ್ಯ ಸಂಯೋಜನೆ ಮಾಡಲಿದ್ದಾರೆ.Sign in to your account
Username or Email Address


Password

 Remember Me


