ಮಂಗಳೂರು: ಕೆಂಪು ಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ಧ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.ಕೆಂಪು ಕೋಟೆ ಮೇಲೆ ಭಗವಧ್ವಜ ಹಾರಿಸ್ತೀವಿ ಅಂತ ಈಶ್ವರಪ್ಪ ಹೇಳಿದ್ರು ಅನ್ನೋ ಕಾರಣಕ್ಕೆ ಅಧಿವೇಶನ ಮೊಟಕುಗೊಳಿಸಿದ್ರು. ಆದರೆ ಬೆಳ್ತಂಗಡಿಯ ಈ ಸಭೆಯಲ್ಲಿ ಬೆಳ್ತಂಗಡಿ ಶಾಸಕನಾಗಿ ನಾನು ಹೇಳ್ತೀನಿ. ಈ ಹಿಂದೂ ಸಮಾಜ ಕೆಂಪು ಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ಧ. ಆದರೆ ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸೋದು ರಾಷ್ಟ್ರಧ್ವಜದ ಕೆಳಗೆ. ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಕೆಳಗೆ ಭಗವಧ್ವಜ ಹಾರಿಸೋದನ್ನ ಯಾವ ಪಕ್ಷದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ನುಡಿದರು. ಇದನ್ನೂ ಓದಿ: ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಧ್ವಜ ಎದುರಿಟ್ಟು ಹೋರಾಟ ಮಾಡಿದರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಧ್ವಜ ಆಗಿದೆ ಎಂದರು.Sign in to your account
Username or Email Address


Password

 Remember Me


