ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್‍ನ 2 ದಿನದ ಪಾದಯಾತ್ರೆ ಬಿಡದಿಯಿಂದ ಬೆಂಗಳೂರು ತಲುಪಿದೆ. ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಹಿನ್ನೆಲೆಯಲ್ಲಿ 37 ಜನ ಕಾಂಗ್ರೆಸ್ ನಾಯಕರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.ಫೆಬ್ರವರಿ 27 ರಂದು ನಿಯಮ ಉಲ್ಲಂಂಘಿಸಿ ಪಾದಯಾತ್ರೆ ನಡೆಸಿದ ಆರೋಪದಡಿ, ಪ್ಯಾಂಡೆಮಿಕ್ ಆಕ್ಟ್‌ನಡಿ ರಾಮನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇವತ್ತು ಬಿಡದಿಯಿಂದ 21 ಕಿ.ಮೀ ದೂರ ಕಾಂಗ್ರೆಸ್ ನಾಯಕರು ಹೆಜ್ಜೆ ಹಾಕಿದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಎಲ್ಲಾ ನಾಯಕರು ಜಂಟಿಯಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಇದನ್ನೂ ಓದಿ: 2ನೇ ದಿನಕ್ಕೆ ಕಾಲಿಟ್ಟ ಮೇಕೆದಾಟು 2.0 ಪಾದಯಾತ್ರೆ – ಬಿಡದಿಯಿಂದ ಕೆಂಗೇರಿವರೆಗೂ ನಡೆಯಲಿರುವ ಕೈ ನಾಯಕರುಕಾಂಗ್ರೆಸ್ ಪಾದಯಾತ್ರೆಗೆ ಚಿತ್ರದುರ್ಗದ ಮುರುಘಾ ಶ್ರೀಗಳು ಸೇರಿದಂತೆ ವಿವಿಧ ಸ್ವಾಮೀಜಿಗಳು ಸಾಥ್ ಕೊಟ್ರು. ಮಾಜಿ ಶಾಸಕ ಮಧು ಬಂಗಾರಪ್ಪ ಡೊಳ್ಳು ಕುಣಿತದ ತಂಡದೊಂದಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ರು. ಈ ನಡುವೆ ಡಿಕೆಶಿ ಮತ್ತು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಇದೀಗ ಕೆಂಗೇರಿಗೆ ಪಾದಯಾತ್ರೆ ತಲುಪಿದ್ದು, ವಿಶೇಷವಾಗಿ ಗುಬ್ಬಿಯ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರವಿದ್ದರೂ, ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ: ಸಿದ್ದು ವ್ಯಂಗ್ಯ






 Advertisement 




Sign in to your account
Username or Email Address


Password

 Remember Me


