ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಇಂದು 268 ಕೇಸ್‍ಗಳಿಗೆ ಇಳಿಕೆ ಕಂಡಿದ್ದು, 14 ಮರಣ ಪ್ರಕರಣ ದಾಖಲಾಗಿದೆ.ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಇಳಿಕೆ ಕಂಡರೂ ಮರಣ ಪ್ರಮಾಣ ಮಾತ್ರ ಕಡಿಮೆ ಆಗುತ್ತಿಲ್ಲ. ಆದರೆ ನಿನ್ನೆಗಿಂತ ಇಂದು 3 ಪ್ರಕರಣ ಕಡಿಮೆ ದಾಖಲಾಗಿದೆ. ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.5.22% ರಷ್ಟಿದೆ. ಪಾಸಿಟಿವಿಟಿ ರೇಟ್ 0.70%ಕ್ಕೆ ಇಳಿಕೆ ಕಂಡಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 5,623ಕ್ಕೆ ಇಳಿಮುಖಗೊಂಡಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಇಂದು ಒಟ್ಟು 161 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 10 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೂನ್‌ನಲ್ಲಿ ಕೊರೊನಾ 4ನೇ ಅಲೆ ಸಾಧ್ಯತೆ – IIT ಸಂಶೋಧಕರಿಂದ ಮಾಹಿತಿಒಟ್ಟು 1,119 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,41,063 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,95,452 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 46,134 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 38,054 ಸ್ಯಾಂಪಲ್ (ಆರ್‌ಟಿಪಿಸಿಆರ್ 31,181 + 6,873 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಆಹಾರ ಇಲ್ಲದೇ ಚಾಕೊಲೇಟ್ ತಿನ್ನುತ್ತಾ ದಿನ ಕಳೆಯುತ್ತಿದ್ದೇವೆ: ವಿದ್ಯಾರ್ಥಿಗಳ ಅಳಲುಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 7, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 161, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 6, ದಕ್ಷಿಣ ಕನ್ನಡ 13, ದಾವಣಗೆರೆ 1, ಧಾರವಾಡ 3, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 1, ಕೊಡಗು 7, ಕೋಲಾರ 5, ಕೊಪ್ಪಳ 7, ಮಂಡ್ಯ 0, ಮೈಸೂರು 11, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 14, ಉಡುಪಿ 3, ಉತ್ತರ ಕನ್ನಡ 3, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


