ಚಿಕ್ಕೋಡಿ: ಯುವಕನೊಬ್ಬ ಕೇವಲ 7 ಗಂಟೆಯಲ್ಲಿ 02 ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 28 ಟನ್ ಕಬ್ಬು ಹೇರಿದ್ದಾನೆ. ಈತನ ಸಾಧನೆ ಕಂಡು ಚಿಕ್ಕೋಡಿ ಜನರು ಹುಬ್ಬೇರಿಸಿದ್ದಾರೆ.ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬರಮಖೋಡಿ ಗ್ರಾಮದ ಅನಿಲ್ ಕಾಬು ಜಾಧವ್ ಸಾಧನೆ ಮಾಡಿದ ಯುವಕ. ಆತನೊಬ್ಬನೇ ಕೇವಲ 7 ಗಂಟೆಯಲ್ಲಿ 02 ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 28 ಟನ್ ಕಬ್ಬು ಹೇರಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾನೆ. ಈ ಹಿಂದೆ ಇದೇ ಬರಮಖೋಡಿ ಗ್ರಾಮದ ಮತ್ತೊಂದು ಕಬ್ಬಿನ ಗ್ಯಾಂಗಿನ ಯುವಕ ಇಷ್ಟೇ ಕಬ್ಬನ್ನು ಎರಡು ಟ್ರಾಲಿಗೆ ತುಂಬಿಸಲು ಸುಮಾರು 9 ಗಂಟೆ 30 ನಿಮಿಷ ಸಮಯ ತಗೊಂಡಿದ್ದನು. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾಇದೀಗ ಜಾಧವ ಗ್ಯಾಂಗಿನ ಅನಿಲ್ ಎರಡು ಡಬ್ಬಿಯಲ್ಲಿ ಸುಮಾರು 28 ಟನ್ ಕಬ್ಬನ್ನು 7 ತಾಸಿನಲ್ಲಿ ಹೇರಿ ದಾಖಲೆ ನಿರ್ಮಿಸಿದ್ದಾನೆ. ಈ ಮೂಲಕ ಹಳೆಯ ದಾಖಲೆಯನ್ನು ಮುರಿದಿದ್ದಾನೆ ಎಂದು ಅಲ್ಲಿದ್ದ ಕಾರ್ಮಿಕರು ಚಪ್ಪಾಳೆ ತಟ್ಟಿ ಅಭಿನಂದಿಸಿದ್ದಾರೆ.ಈ ಕುತಿತು ಪ್ರತಿಕ್ರಿಯಿಸಿದ ಅನಿಲ್, ಸಾಧನೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಇನ್ನೂ ಹೆಚ್ಚಿನ ಸಾಧನೆ ಮಾಡುವ ವಿಶ್ವಾಸವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾನೆ.Sign in to your account
Username or Email Address


Password

 Remember Me


