ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ನಿನ್ನೆ ಒಟ್ಟು ರಾಜ್ಯದಲ್ಲಿ 514 ಪಾಸಿಟಿವ್ ಕೇಸ್ ದಾಖಲಾಗಿತ್ತು. ಇಂದು 366 ಕೇಸ್‍ಗಳಿಗೆ ಇಳಿಕೆ ಕಂಡಿದೆ. ಒಟ್ಟು 24 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಕೇಸ್‌ ದಾಖಲಾಗಿದೆ.ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡರೂ ಮರಣ ಪ್ರಮಾಣ ಇಳಿಕೆ ಕಾಣುತ್ತಿಲ್ಲ. ಇಂದು ಒಟ್ಟು 17 ಮರಣ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 0.69%ಕ್ಕೆ ಇಳಿಕೆ ಕಂಡಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 6,488ಕ್ಕೆ ಇಳಿಮುಖಗೊಂಡಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಇಂದು ಒಟ್ಟು 224 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 11 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತದ ಧ್ವಜವಿದ್ದ ಕಾರಣ ಸುಲಭವಾಗಿ ಗಡಿ ದಾಟಿದ್ದೇವೆ: ವಿದ್ಯಾರ್ಥಿಗಳುಒಟ್ಟು 801 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,40,795 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,94,333 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.4.64% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 15,032 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 52,475 ಸ್ಯಾಂಪಲ್ (ಆರ್‌ಟಿಪಿಸಿಆರ್ 41,167 + 11,308 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 2, ಬಳ್ಳಾರಿ 9, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 224, ಬೀದರ್ 2, ಚಾಮರಾಜನಗರ 4, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 2, ಚಿತ್ರದುರ್ಗ 6, ದಕ್ಷಿಣ ಕನ್ನಡ 10, ದಾವಣಗೆರೆ 1, ಧಾರವಾಡ 7, ಗದಗ 0, ಹಾಸನ 8, ಹಾವೇರಿ 2, ಕಲಬುರಗಿ 9, ಕೊಡಗು 4, ಕೋಲಾರ 1, ಕೊಪ್ಪಳ 5, ಮಂಡ್ಯ 2, ಮೈಸೂರು 17, ರಾಯಚೂರು 4, ರಾಮನಗರ 1, ಶಿವಮೊಗ್ಗ 4, ತುಮಕೂರು 7, ಉಡುಪಿ 5, ಉತ್ತರ ಕನ್ನಡ 5, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 3 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


