ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜಯ ನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿದ್ದಾರೆ.ಬಿಎಸ್‍ವೈ ಆರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಿಎಸ್‍ವೈ ಜೊತೆಯಲ್ಲೇ ದೇವಸ್ಥಾನಕ್ಕೆ ಆಗಮಿಸಿದ ಬಿ.ವೈ ವಿಜಯೇಂದ್ರ ವಿಶೇಷ ಪೂಜೆ, ಆರ್ಚನೆ ಮಾಡಿಸಿದ್ದಾರೆ. ನಂತರ ಕಾವೇರಿ ನಿವಾಸದಲ್ಲಿ ಕೇಕ್ ಕತ್ತರಿಸಿ ಬರ್ತ್‍ಡೇ ಆಚರಿಸಿಕೊಂಡ ಯಡಿಯೂರಪ್ಪ, ಅಭಿಮಾನಿಗಳು ತಂದಿದ್ದ ದೊಡ್ಡ ಗಾತ್ರದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಅಮಿತ್ ಷಾ ದೂರವಾಣಿ ಕರೆ ಮಾಡಿ ಶುಭಕೋರಿದ್ದಾರೆ. ಇದನ್ನೂ ಓದಿ:‌ ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷಹಿರಿಯ ನಾಯಕರು, ಮಾರ್ಗದರ್ಶಕರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.#HBDBSY pic.twitter.com/c3y54sDN1p— BJP Karnataka (@BJP4Karnataka) February 27, 2022ಹುಟ್ಟುಹಬ್ಬ ಹಿನ್ನೆಲೆ ಕಾವೇರಿ ನಿವಾಸದಲ್ಲಿ 14 ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ವಿತರಿಸಿದ ಬಿಎಸ್‌ವೈ, ಉಳಿದ ಟ್ರ್ಯಾಕ್ಟರ್ ಗಳನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ರೈತರಿಗೆ ಹಂಚಿಕೆ ಮಾಡಲು ಸೂಚನೆ ನೀಡಿದ್ದಾರೆ. ಈ ವೇಳೆ ಪುತ್ರರಾದ ವಿಜಯೇಂದ್ರ, ರಾಘವೇಂದ್ರ, ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಆರ್.ವಿಶ್ವನಾಥ್ ಉಪಸ್ಥಿತಿಬೆಂಗಳೂರಿನಲ್ಲಿ ಕಾವೇರಿ ನಿವಾಸದಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮಾತನಾಡಿ,ಯಡಿಯೂರಪ್ಪ ಅಂದರೆ ಚೈತನ್ಯದ ಚಿಲುಮೆ ಅವರನ್ನು ನೋಡಿದರೆ ನಮಗೆ ನೂರು ಪಟ್ಟು ಶಕ್ತಿ ತುಂಬಿದಂತಾಗುತ್ತದೆ. ರಾಜ್ಯದಲ್ಲಿ ಮುಂದಿನ ಚುನಾವಣೆಗಳು ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಬೇಕು. ನಮ್ಮೆಲ್ಲರಿಗೆ ಶಕ್ತಿ ತುಂಬಲು ಅವರು ಮತ್ತೊಮ್ಮೆ ಜನತೆಯ ಸೇವೆ ಮಾಡುವಂತಾಗಬೇಕು.






 Advertisement 




Sign in to your account
Username or Email Address


Password

 Remember Me


