ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು ಬೆಂಗಳೂರು ನಗರವನ್ನು ಹೊರತು ಪಡಿಸಿ ಇತರ ಜಿಲ್ಲೆಗಳಲ್ಲಿ 30ಕ್ಕಿಂತ ಹೆಚ್ಚಿನ ಕೇಸ್ ಎಲ್ಲೂ ದಾಖಲಾಗಿಲ್ಲ. ಒಟ್ಟು ರಾಜ್ಯದಲ್ಲಿ 514 ಪಾಸಿಟಿವ್ ಕೇಸ್ ದಾಖಲಾಗಿದ್ದು, 19 ಮರಣ ಪ್ರಕರಣ ವರದಿಯಾಗಿದೆ.ಪಾಸಿಟಿವಿಟಿ ರೇಟ್ 0.84%ಕ್ಕೆ ಇಳಿಕೆ ಕಂಡಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 6,940ಕ್ಕೆ ಇಳಿಮುಖಗೊಂಡಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಇಂದು ಒಟ್ಟು 345 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 13 ಮರಣ ಪ್ರಕರಣ ದಾಖಲಾಗಿದೆ. ಕೆಲ ದಿನಗಳಿಂದ ಮರಣ ಪ್ರಕರಣದಲ್ಲಿ ಹೆಚ್ಚಿನ ವ್ಯತ್ಯಾಸ ಕಾಣಸಿಗುತ್ತಿಲ್ಲ. ಇದನ್ನೂ ಓದಿ: ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲುಒಟ್ಟು 1,073 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,40,429 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,93,532 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.3.69% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 76,028 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 61,040 ಸ್ಯಾಂಪಲ್ (ಆರ್‌ಟಿಪಿಸಿಆರ್ 46,325 + 14,715 ರ್‍ಯಾಪಿಡ್ ಆಂಟಿಜನ್) ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪ್ರಮೋದ್ ಮುತಾಲಿಕ್, ಚೈತ್ರಾ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿದ ಡಿಸಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 9, ಬೆಳಗಾವಿ 20, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 345, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 6, ಚಿತ್ರದುರ್ಗ 5, ದಕ್ಷಿಣ ಕನ್ನಡ 7, ದಾವಣಗೆರೆ 4, ಧಾರವಾಡ 14, ಗದಗ 0, ಹಾಸನ 14, ಹಾವೇರಿ 0, ಕಲಬುರಗಿ 8, ಕೊಡಗು 16, ಕೋಲಾರ 5, ಕೊಪ್ಪಳ 1, ಮಂಡ್ಯ 0, ಮೈಸೂರು 28, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 8, ಉಡುಪಿ 4, ಉತ್ತರ ಕನ್ನಡ 11, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


