ರಾಮನಗರ: ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.ಗಂಟಪ್ಪ ಕೊಲೆಯಾದ ದುರ್ದೈವಿ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರದ್ದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಸದ್ಯ ಕೊಲೆಯಾದ ಗಂಟಪ್ಪ ಅವರ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ.ಘಟನೆ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯದ ಮೊದಲ ಸಿಎಂ ಆಗಿದ್ದ ಹೇಮಾನಂದ ಬಿಸ್ವಾಲ್ ನಿಧನSign in to your account
Username or Email Address


Password

 Remember Me


