ಪುನೀತ್ ರಾಜ್ ಕುಮಾರ್ ಅವರ ಪಿ.ಆರ್.ಕೆ ಬ್ಯಾನರ್ ನಿಂದ ಮೂಡಿ ಬಂದಿರುವ “ಫ್ಯಾಮಿಲಿ ಪ್ಯಾಕ್” ಚಿತ್ರ ನಿರ್ದೇಶಕನಿಗೆ ಟಾಲಿವುಡ್ ನಿಂದ ಮೆಗಾ ಆಫರ್ ಬಂದಿದೆ. ಟಾಲಿವುಡ್ ನ ಎರಡು ನಿರ್ಮಾಣ ಸಂಸ್ಥೆಗಳು ನಿರ್ದೇಶಕ ಅರ್ಜುನ್ ಕುಮಾರ್ ಗೆ ಸಿನಿಮಾ ಮಾಡುವಂತೆ ಆಹ್ವಾನ ನೀಡಿವೆ. ಈ ಬಗ್ಗೆ ನಿರ್ದೇಶಕರು ಪ್ರತಿಕ್ರಿಯಿಸಿ, “ಎರಡು ನಿರ್ಮಾಣ ಸಂಸ್ಥೆಗಳು ತಮಗೆ ಸಿನಿಮಾ ಮಾಡುವಂತೆ ಕೇಳಿವೆ. ಆದರೆ, ಸದ್ಯಕ್ಕೆ ಯಾವುದೂ ಅಂತಿಮವಾಗಿಲ್ಲ. ಈಗಲೇ ಅದೆಲ್ಲವನ್ನು ನಾನು ರಿವೀಲ್ ಮಾಡುವುದಿಲ್ಲ. ಸದ್ಯ ಪಿಆರ್​ಕೆ ಸಂಸ್ಥೆ ವತಿಯಿಂದ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಅದೇ ಖುಷಿಯ ವಿಚಾರ” ಅಂತಾರೆ. ಇದನ್ನೂ ಓದಿ : ಫೆ.27ಕ್ಕೆ ಡಾ.ಅಂಬರೀಶ್ ಸ್ಮಾರಕ ಶಂಕು ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ ಭಾಗಿಫ್ಯಾಮಿಲಿ ಪ್ಯಾಕ್ ಸಿನಿಮಾದ ಬಗ್ಗೆ ಅವರು ಮಾತನಾಡಿ, “ಸಿನಿಮಾ ಶೀರ್ಷಿಕೆ ನೋಡಿ ಇದೊಂದು ಡಬಲ್ ಮೀನಿಂಗ್ ಸಿನಿಮಾ ಅಂದುಕೊಂಡವರೇ ಹೆಚ್ಚು. ಆದರೆ ಇದೊಂದು ಪಕ್ಕಾ ಕೌಟುಂಬಿಕ ಚಿತ್ರ. ಪಿಆರ್​ಆಕೆ ಸಿನಿಮಾ ಸಂಸ್ಥೆ ವಜ್ರೇಶ್ವರಿ ಸಂಸ್ಥೆ ಹಾಕಿಕೊಟ್ಟ ದಾರಿಯಲ್ಲಿಯೇ ನಡೆಯಲಿದೆ. ಆ ಸಂಸ್ಥೆ ಸಾಗಿ ಬಂದ ರೀತಿಯಲ್ಲಿಯೇ ಮನರಂಜನಾತ್ಮಕ ಸಿನಿಮಾಗಳನ್ನು ನೀಡುವುದು ಸಂಸ್ಥೆಯ ಉದ್ದೇಶ. ಹಾಗಾಗಿ ನಾವೂ ಕೂಡ ಶುದ್ಧ ಮನರಂಜನೆ ಸಿನಿಮಾ ಮಾಡಿದ್ದೇವೆ” ಅಂತಾರೆ. ಇದನ್ನೂ ಓದಿ : ವಿಮಾನದಲ್ಲೂ ಯಶ್-ರಾಧಿಕಾ ಪಂಡಿತ್ ಅವರ ಮಕ್ಕಳ ಆಟಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್ ನಾಯಕ, ನಾಯಕಿಯಾಗಿ ನಟಿಸಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಓಟಿಟಿಯಲ್ಲಿ ರಿಲೀಸ್ ಆಗಿತ್ತು. ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ.Sign in to your account
Username or Email Address


Password

 Remember Me


