ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 8,255 ಇಳಿಕೆ ಕಂಡಿದ್ದು, ಪಾಸಿಟಿವ್ ಕೇಸ್ 588 ಮತ್ತು 19 ಮರಣ ಪ್ರಕರಣ ದಾಖಲಾಗಿದೆ.ಪಾಸಿಟಿವಿಟಿ ರೇಟ್ 0.84%ಕ್ಕೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಕೂಡ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಇಂದು ಒಟ್ಟು 353 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 14 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಮುಸ್ಲಿಂ ರಿಪಬ್ಲಿಕ್ ಕೂಡಾ ಅಲ್ಲ ಜಾತ್ಯಾತೀತ ರಾಷ್ಟ್ರ – ಹಿಜಬ್ ಬಿಡಲು ಸಾಧ್ಯವಿಲ್ಲಒಟ್ಟು 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,39,287 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,91,110 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.3.23% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 1,05,895 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 69,388 ಸ್ಯಾಂಪಲ್ (ಆರ್​ಟಿಪಿಸಿಆರ್ 50,517 + 18,871 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.  ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ತೆಗೆಸಿದಂತೆ ಟರ್ಬನ್ ತೆಗೆಸಿ – ರಾಜಧಾನಿಯಲ್ಲಿ ಟರ್ಬನ್ ಸಂಘರ್ಷಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 10, ಬಳ್ಳಾರಿ 14, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 353, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 6, ಚಿತ್ರದುರ್ಗ 9, ದಕ್ಷಿಣ ಕನ್ನಡ 23, ದಾವಣಗೆರೆ 6, ಧಾರವಾಡ 3, ಗದಗ 1, ಹಾಸನ 6, ಹಾವೇರಿ 4, ಕಲಬುರಗಿ 11, ಕೊಡಗು 15, ಕೋಲಾರ 1, ಕೊಪ್ಪಳ 0, ಮಂಡ್ಯ 4, ಮೈಸೂರು 28, ರಾಯಚೂರು 4, ರಾಮನಗರ 1, ಶಿವಮೊಗ್ಗ 7, ತುಮಕೂರು 8, ಉಡುಪಿ 15, ಉತ್ತರ ಕನ್ನಡ 23, ವಿಜಯಪುರ 5 ಮತ್ತು ಯಾದಗಿರಿಯಲ್ಲಿ 4 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


