ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಕೋವಿಡ್‍ನಿಂದ ಚೇತರಿಸಿಕೊಳ್ಳುತ್ತಿದೆ.ಬುಧವಾರ ಒಟ್ಟು 667 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 21 ಜನ ಸೊಂಕಿನಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ ಹಾಗೂ ಬೀದರ್ ಜಿಲ್ಲೆಗಳಲ್ಲಿ ಇಂದು ಯಾವುದೇ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: 8ನೇ ಆರೋಪಿ ಬಂಧನ – ಶಿವಮೊಗ್ಗದಲ್ಲಿ 7 ಡ್ರೋಣ್‍ಗಳ ಕಾರ್ಯಾಚರಣೆಇಂದು ರಾಜ್ಯದಲ್ಲಿ 1,674 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯ ವರೆಗೆ 38,89,418 ರೋಗಿಗಳು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸದ್ಯ 9,378 ಸಕ್ರಿಯ ಪ್ರಕರಣಗಳು ಇದ್ದು, ಕೋವಿಡ್-19 ಮರಣ ಪ್ರಮಾಣ ಶೇ.3.14 ಇದೆ. ಇದನ್ನೂ ಓದಿ: ಹಿಜಬ್ ಹಾಕಿದಂತೆ ಶಾಲೆಗಳಲ್ಲಿ ಕೇಸರಿ ಹಾಕಿಸುತ್ತೇವೆ, ನಮ್ಮ ಅನ್ನ ತಿಂದು ನಮಗೆ ದ್ರೋಹ: ಬಸವರಾಜ್ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 24, ಬೆಳಗಾವಿ 32, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 368, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳುರು 11, ಚಿತ್ರದುರ್ಗ 6, ದಕ್ಷಿಣ ಕನ್ನಡ 18, ದಾವಣಗೆರೆ 4, ಧಾರವಾಡ 6, ಗದಗ 2, ಹಾಸನ 17, ಹಾವೇರಿ 2, ಕಲಬುರಗಿ 10, ಕೊಡಗು 16, ಕೋಲಾರ 4, ಕೊಪ್ಪಳ 1, ಮಂಡ್ಯ 13, ಮೈಸೂರು 28, ರಾಯಚುರು 6, ರಾಮನಗರ 4, ಶಿವಮೊಗ್ಗ 28, ತುಮಕುರು 20, ಉಡುಪಿ 15, ಉತ್ತರ ಕನ್ನಡ 10, ವಿಜಯಪುರ 8 ಹಾಗೂ ಯಾದಗಿರಿ 1 ಕೋವಿಡ್ ಪ್ರಕರಣಗಳು ದಾಖಲಾಗಿವೆ.Sign in to your account
Username or Email Address


Password

 Remember Me


