ರಾಮಾ ರಾಮಾ ರೇ ಸಿನಿಮಾ ಖ್ಯಾತಿಯ ನಟರಾಜ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾದ ವಿಶೇಷ ಅಂದರೆ, ಕನ್ನಡದ ಖ್ಯಾತ ಕಥೆಗಾರ ಕುಂ.ವೀರಭದ್ರಪ್ಪ ಬರೆದ ಕುಬುಸ ಕಥೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಸಿನಿಮಾ ‘ಕುಬುಸ’ ಹೆಸರಿನಲ್ಲೇ ಮೂಡಿ ಬರಲಿದೆ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟನಟರಾಜ್ ನಾಯಕನಾಗಿ ಬಣ್ಣ ಹಚ್ಚಿದ್ದು, ಈ ಎರಡು ಶೇಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಮೇಶ್ ರೇಣುಕಾ ರಾಮ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಸಿನಿಮಾದ ಫಸ್ಟ್ ಲುಕ್ ನಟರಾಜ್ ಬರ್ತ್ ಡೇಗೆ ರಿಲೀಸ್ ಆಗಿದೆ. ನಟರಾಕ್ಷಸ ಡಾಲಿ ಧನಂಜಯ್ ಫಸ್ಟ್ ಲುಕ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಅಂದಹಾಗೇ ಕುಬುಸ ಸಿನಿಮಾಗೆ ವಿ ಶೋಭಾ ಶರ್ಮಾ ಬಂಡವಾಳ ಹಾಕಿದ್ದು, ಚೇತನ್ ಶರ್ಮಾ ಕ್ಯಾಮೆರಾ, ಪ್ರವೀಣ್ ಚಂದ್ರ ಮ್ಯೂಸಿಕ್ ಚಿತ್ರಕ್ಕಿದೆ. ಇದನ್ನೂ ಓದಿ : ನಾನು ರಾಧಿಕಾ ಕುಮಾರಸ್ವಾಮಿ’.. ನಿಮ್ಮೊಂದಿಗೆ..ನಟರಾಜ್.. ಮೂಲತಃ ಚಿಕ್ಕಮಗಳೂರಿನ ಕಡೂರಿನವರಾದ ನಟರಾಜ್ ಕಾನೂನು ಪದವೀದರರು. ಕಾನೂನು ಪದವಿ ಪಡೆದು ವಕೀಲ ವೃತ್ತಿಗಿಂತ ಅವರನ್ನು ಸೆಳೆದಿದ್ದು ಸಿನಿಮಾಲೋಕ. ಹೀಗಾಗಿ ಸಿನಿಮಾ ಕಡೆ ಬಂದ ನಟರಾಜ್ ಹೊಸ ಸಿನಿಮಾಗಳ ಪೋಸ್ಟರ್ ಜೊತೆಗೆ ಮತ್ತೆರೆಡು ಸಿನಿಮಾಗೂ ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.Sign in to your account
Username or Email Address


Password

 Remember Me


