ಮೈಸೂರು: ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ.ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ಈ ಜೋಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಈ 4 ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ವಿವಾಹವಾಗಿದ್ದರು. ಮದುವೆಯಾಗಿ ಕೇವಲ ನಾಲ್ಕು ತಿಂಗಳಿಗೆ ಈ ನವಜೋಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ. ಇದನ್ನೂ ಓದಿ:  1,200 ವರ್ಷದಷ್ಟು ಹಳೆಯ ಮಕ್ಕಳ, ವಯಸ್ಕರ ಅವಶೇಷ ಪತ್ತೆ!ಏನಿದು ಘಟನೆ?
ಗ್ರಾಮದ ರಾಕೇಶ್(25), ಅರ್ಚನಾ(20)ಮೃತ ಪ್ರೇಮಿಗಳು. ರಾಕೇಶ್ ಮತ್ತು ಅರ್ಚನಾ ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇಬ್ಬರೂ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಪೋಷಕರು ವಿರೋಧ ಇದ್ದ ಹಿನ್ನೆಲೆ ಪ್ರೇಮಿಗಳು ನಾಲ್ಕು ತಿಂಗಳ ಹಿಂದೆ ಓಡಿ ಹೋಗಿ ಮದುವೆಯಾಗಿದ್ದರು.ತಡರಾತ್ರಿ ಗ್ರಾಮಕ್ಕೆ ಬಂದು ಊರ ಹೊರವಲಯದಲ್ಲಿ ಮರಕ್ಕೆ ನವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ವಿರೋಧವಿತ್ತು. ಆದರೂ ಇಬ್ಬರು ಮದುವೆಯಾಗಿದ್ದು, ಈ ದುಸ್ಥಿತಿ ಬಂದಿರುವುದು ವಿಪರ್ಯಾಸವಾಗಿದೆ. ಇದನ್ನೂ ಓದಿ: ಅತಿ ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ನೀಡಲು ಆಯೋಗ ರಚಿಸಬೇಕು – ರಾಜ್ಯಪಾಲರಿಗೆ ಮನವಿಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


