ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಇಂದು 767 ಪಾಸಿಟಿವ್ ಕೇಸ್ ದಾಖಲಾಗಿದೆ. ಒಟ್ಟು 29 ಮರಣ ಪ್ರಕರಣ ಪತ್ತೆಯಾಗಿದೆ.ರಾಜ್ಯದ 3 ಜಿಲ್ಲೆಗಳಾದ ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 1.31%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,406 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 552 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 14 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹರ್ಷ ಕೊಲೆ ಕೇಸ್ – 7 ಆರೋಪಿಗಳು ಯಾರು? ಯಾರ ಪಾತ್ರ ಏನು?ಒಟ್ಟು 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,38,032 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,87,744 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.3.78% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 1,07,394 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 58,459 ಸ್ಯಾಂಪಲ್ (ಆರ್‌ಟಿಪಿಸಿಆರ್ 35,067 + 23,392 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: 9 ಎಫ್‍ಐಆರ್, 7 ಮಂದಿ ಅರೆಸ್ಟ್‌ – ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 2, ಬಳ್ಳಾರಿ 10, ಬೆಳಗಾವಿ 22, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 552, ಬೀದರ್ 1, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 5, ಚಿತ್ರದುರ್ಗ 9, ದಕ್ಷಿಣ ಕನ್ನಡ 20, ದಾವಣಗೆರೆ 3, ಧಾರವಾಡ 10, ಗದಗ 2, ಹಾಸನ 7, ಹಾವೇರಿ 1, ಕಲಬುರಗಿ 3, ಕೊಡಗು 14, ಕೋಲಾರ 9, ಕೊಪ್ಪಳ 0, ಮಂಡ್ಯ 5, ಮೈಸೂರು 23, ರಾಯಚೂರು 0, ರಾಮನಗರ 2, ಶಿವಮೊಗ್ಗ 10, ತುಮಕೂರು 21, ಉಡುಪಿ 15, ಉತ್ತರ ಕನ್ನಡ 6, ವಿಜಯಪುರ 3 ಮತ್ತು ಯಾದಗಿರಿಯಲ್ಲಿ  ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ. 






 Advertisement 




Sign in to your account
Username or Email Address


Password

 Remember Me


