ಬೆಂಗಳೂರು: ಹೆಣದ ಮೇಲೆ ರಾಜಕೀಯ ಮಾಡುವ ಅಭ್ಯಾಸ ಕಾಂಗ್ರೆಸ್‍ಗೆ ಇಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾವು ಇಷ್ಟು ದಿನ ಏನನ್ನು ಹೇಳಿದ್ದೇವೋ ಅದನ್ನೇ ಜೆಪಿ ನಡ್ಡಾ ಅವರು ಕೂಡ ಹೇಳಿದ್ದಾರೆ. ಈಶ್ವರಪ್ಪ ಅವರನ್ನು ಈ ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಇಲ್ಲವೆಂದರೆ ತಕ್ಷಣವೇ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ:  ಹರ್ಷನ ಒಂದೊಂದು ರಕ್ತದ ಹನಿಯೂ ವ್ಯರ್ಥವಾಗದಂತೆ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಶಪಥ ಮಾಡ್ತೇವೆ: ಪ್ರಮೋದ್ ಮುತಾಲಿಕ್ಬಿ.ಕೆ.ಹರಿಪ್ರಸಾದ್ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಏನೇ ಹೇಳಲಿ ಹೆಣದ ಮೇಲೆ ರಾಜಕೀಯ ಮಾಡುವ ಅಭ್ಯಾಸ ಕಾಂಗ್ರೆಸ್‍ಗೆ ಇಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿಯವರು. ಗೃಹ ಸಚಿವರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 144 ಸೆಕ್ಷನ್ ಸಹಾ ಉಲ್ಲಂಘನೆ ಆಗಿದೆ. ಹಾಗಾಗಿ ಗೃಹ ಸಚಿವರು ತಕ್ಷಣವೇ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸದ್ಯ ಪರಿಸ್ಥಿತಿ ಕಂಟ್ರೋಲ್‍ಗೆ ಬಂದಿದೆ: ಶಿವಮೊಗ್ಗ ಡಿಐಜಿSign in to your account
Username or Email Address


Password

 Remember Me


