ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ (Renukaswamy Kidnap & Murder Case) ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಪರಪ್ಪನ ಅಗ್ರಹಾರ ಸೇರಿದ್ದಾರೆ. ನಟ ದರ್ಶನ್ ಜೈಲು ಸೇರುವುದು ಇದೇ ಮೊದಲಲ್ಲ ಈ ಹಿಂದೆಯೂ ಒಂದು ಬಾರಿ ಜೈಲೂಟ ತಿಂದು ಬಂದವರಾಗಿದ್ದಾರೆ.ಹೌದು. ಪತ್ನಿ ವಿಜಯಲಕ್ಷ್ಮಿ (Vijayalakshmi) ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಆರೋಪದಲ್ಲಿ 2011 ಸೆಪ್ಟೆಂಬರ್ 9 ರಂದು ದರ್ಶನ್ ಬಂಧಿತರಾಗಿದ್ದರು. ಈ ಪ್ರಕರಣದಲ್ಲಿ ಅಂದು ವಿಜಯನಗರ ಪೊಲೀಸರು ದರ್ಶನ್ (Challening Star Darshan) ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಸುಮಾರು ತಿಂಗಳ ಕಾಲ ಜೈಲುವಾಸ ಅನುಭವಿಸಿ 2011 ಅಕ್ಟೋಬರ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.ಈಗ ಬರೋಬ್ಬರಿ 13 ವರ್ಷಗಳ ನಂತರ ಮತ್ತೆ ದರ್ಶನ್ ಸೆರೆಮನೆಗೆ ತೆರಳಿದ್ದಾರೆ. ಈ ಬಾರಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈ ಮೂಲಕ ನಟ ದರ್ಶನ್ ತಮ್ಮ ಜೀವನದಲ್ಲಿ ಎರಡನೇ ಬಾರಿಗೆ ಜೈಲುವಾಸ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಜು. 4 ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲುಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮಾತ್ರವಲ್ಲದೇ ಸ್ನೇಹಿತೆ ಪವಿತ್ರಾ ಗೌಡ ಕೂಡ ಜೈಲುಪಾಲಾಗಿದ್ದಾರೆ. ದರ್ಶನ್ ಸೇರಿ ಸುಮಾರು 16 ಮಂದಿಯನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಬಳಿಕ ಮೂರು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಇಂದು ದರ್ಶನ್ ಸಹಿತ ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್‍ಗೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ದರ್ಶನ್ ಸೇರಿ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.Sign in to your account
Username or Email Address


Password

 Remember Me


