ಹಾಸನ: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ (Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ (Holenarsupra Police Station) ಎಫ್‌ಐಆರ್ (FIR) ದಾಖಲಾಗಿದೆ.ಅರಕಲಗೂಡು ಮೂಲದ ಸಂತ್ರಸ್ತ ಯುವಕ  ಬೆಂಗಳೂರಿನಲ್ಲಿ ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ.  ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ (Shivakumar) ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.5 ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದಾನೆ  ಎಂದು ಆರೋಪಿಸಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್‌ 384, 506 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದೂರಿನಲ್ಲಿ ಏನಿದೆ?
ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ನಾನು ಫೋನ್‌ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ.ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸ್‌ ಕೆಲಸ ಕೊಡಿಸುತ್ತಿಲ್ಲ. ನನಗೆ ತುಂಬಾ ಕಷ್ಟ ಇದೆ. ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಸೂರಜ್‌ ರೇವಣ್ಣ ಕೇಳಿದ್ದರು. ಜೂನ್‌ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಬೇಡಿಕೆ ಇಟ್ಟಿದ್ದಾನೆ.ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.Sign in to your account
Username or Email Address


Password

 Remember Me


