ಧಾರವಾಡ: ನಿನ್ನೆ ತಡರಾತ್ರಿ ಧಾರವಾಡ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿನ ಶ್ರೀಗಂಧದ ಮರ ಕಳ್ಳತನವಾಗಿದೆ.ಬೆಳಗ್ಗೆ ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ.ಎಸ್.ಉಪ್ಪಾರ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಗೂಂಡಾಗಳಿಂದ ಕೊಲೆ – ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿಈ ಕುರಿತು ಪ್ರಕಟಣೆ ನೀಡಿರುವ ಅವರು, ನಿನ್ನೆ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳವನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ : ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್ಈಗಾಗಲೇ ಅರಣ್ಯ ಇಲಾಖೆಯಿಂದ ಎಫ್‍ಐಆರ್ ದಾಖಲಿಸಲಾಗಿದೆ. ತನಿಖೆ ಆರಂಭಿಸಲಾಗಿದ್ದು, ಶೀಘ್ರದಲ್ಲೇ ಮರ ಕಳ್ಳರನ್ನು ಬಂಧಿಸಲಾಗುವುದು ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್ ಎಸ್ ಉಪ್ಪಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Sign in to your account
Username or Email Address


Password

 Remember Me


